--Ads--

ಚಾಮುಂಡಿ ಬೆಟ್ಟದಲ್ಲಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

On: July 16, 2026 9:12 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಚಾಮುಂಡಿ ಬೆಟ್ಟದಲ್ಲಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಜುಲೈ 15 ಇತಿಹಾಸ ಪ್ರಸಿದ್ದಿಯುಳ್ಳ ಹೆಸರಾಂತ ತಾಯಿ ಚಾಮುಂಡೇಶ್ವರಿ ದೇವಿಯ ಚಾಮುಂಡಿ ಬೆಟ್ಟದಲ್ಲಿ ನಾಳಿದ್ದು 17ರಿಂದ ಆಶಾಡ ಮಾಸ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಒದಗಿಸುವ ಸಿದ್ಧತಾ ಕಾರ್ಯಕ್ರಮಗಳನ್ನು ನಗರಾಭಿವೃದ್ಧಿ ಸಚವ ಡಾ ಯತೀಂದ್ರ ಸಿದ್ದರಾಮಯ್ಯನವರು ಇಂದು ಸಿದ್ಧತಾ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಯಲ್ಲಿ ಪರಿಶೀಲನೆ ನಡೆಸಿದರು.

ಬಳಿಕ ಅವರು ಸುದ್ದಿಗಾರರೊಂದಿಗೆ ಮಾತಾಡುತ್ತಾ ವ್ಯವಸ್ಥೆಗಳನ್ನು ಕಲ್ಪಿಸಲು ಮೈಸೂರು ನಗರದ ಲಲಿತ ಮಹಲ್ ಹೆಲಿಪ್ಯಾಡ್‌ನಿಂದ ಚಾಮುಂಡಿ ಬೆಟ್ಟದವರೆಗೆ ಕೈಗೊಂಡಿರುವ ಪೂರ್ವಸಿದ್ಧತೆಗಳನ್ನು ಇಂದು ಸ್ಥಳ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ವಾಹನ ನಿಲುಗಡೆ ವ್ಯವಸ್ಥೆ, ಭಕ್ತರಿಗಾಗಿ ವಿಶೇಷ ಬಸ್ ಸೇವೆ, ಕುಡಿಯುವ ನೀರಿನ ವ್ಯವಸ್ಥೆ, ಸರತಿ ಸಾಲು ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಶೌಚಾಲಯಗಳ ಸೌಲಭ್ಯಗಳನ್ನು ಸಚಿವರು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಆಷಾಢ ಶುಕ್ರವಾರದಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಎಲ್ಲಾ ಮೂಲಸೌಕರ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಸ್ವಚ್ಛತೆ, ಕುಡಿಯುವ ನೀರು, ಸಾರಿಗೆ, ಸರತಿ ಸಾಲಿನ ವ್ಯವಸ್ಥೆ ಹಾಗೂ ಶೌಚಾಲಯಗಳ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಭಕ್ತರು ಸುರಕ್ಷಿತವಾಗಿ ಹಾಗೂ ಸುಗಮವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಸಮಯಕ್ಕೆ ಮುನ್ನ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ರೂಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ CEO ಯುಕೇಶ್ ಕುಮಾರ್ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಮೂಡ ಮಾಜಿ ಅಧ್ಯಕ್ಷ ರಾಜೀವ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಸಾಮಾಜಿಕ ಸೇವೆಯ ಮೂಲಕ ಅರ್ಥಪೂರ್ಣ ಹುಟ್ಟುಹಬ್ಬ ಆಚರಿಸಿಕೊಂಡ  ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು 

ಚಾಮುಂಡಿ ಬೆಟ್ಟದ ಆಷಾಢ ಶುಕ್ರವಾರಕ್ಕೆ ಭಕ್ತರ ದರ್ಶನಕ್ಕೆ ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ.

ಮುಳ್ಳೇಗುಡ್ಡದಲ್ಲಿರುವ ಶ್ರೀ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಶಾಸಕ ದರ್ಶನ್ ಧ್ರುವನಾರಾಯಣ್ ಬೇಟಿ ಪರಿಶೀಲನೆ

ಕೃಷ್ಣರಾಜ ಸಾಗರ (KRS) ಜಲಾಶಯದ ಅಚ್ಚುಕಟ್ಟು ಪ್ರದೇಶದ ಪ್ರಸ್ತುತ ಪರಿಸ್ಥಿತಿಯ ಮಹತ್ವದ ಅವಲೋಕನ ಸಭೆ

ಮೈಸೂರು ದಸರಾ ದೃಶ್ಯ ಕಲಾವಿದರ ಸಂಘ ಅಸ್ತಿತ್ವಕ್ಕೆ

ಮೈಸೂರು ವಿ ವಿ ಎಸ್ಸಿ ಮತ್ತು ಎಸ್ ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆ: ಅಧಿಕಾರಿಗಳೊಂದಿಗೆ  ಸಚಿವ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ