ವಿಜಯ ದರ್ಪಣ ನ್ಯೂಸ್….
ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸಭೆ

ಬೆಂಗಳೂರು ಜುಲೈ 16: ನಗರಗಳ ಸುಸ್ಥಿರ ಹಾಗೂ ಸಮಗ್ರ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿ, ಹೊಸ ಬಸ್ ನಿಲ್ದಾಣಗಳ ನಿರ್ಮಾಣ, ಸಂಚಾರ ನಿರ್ವಹಣಾ ವ್ಯವಸ್ಥೆ (ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್), ವಿದ್ಯುತ್ ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರಗಳ ವಿಸ್ತರಣೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಇಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸಭೆ ನಡೆಸಿ ಈ ಬಗ್ಗೆ ಚರ್ಚೆ ನಡೆಸಿದರು
ಸಾರ್ವಜನಿಕರಿಗೆ ಸುರಕ್ಷಿತ, ಸುಗಮ, ಪರಿಸರ ಸ್ನೇಹಿ ಹಾಗೂ ತಂತ್ರಜ್ಞಾನ ಆಧಾರಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಅನುಷ್ಠಾನಗೊಳಿಸುವಂತೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು
ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ನಗರ ಭೂ ಸಾರಿಗೆ ಇಲಾಖೆಯ ಆಯುಕ್ತ ಮಣಿವಣ್ಣನ್ ಹಾಗೂ ನಗರ ಭೂ ಸಾರಿಗೆ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು
ಗುರುರಾಯರ ಸನ್ನಿಧಿಯಲ್ಲಿ ಮಾಧವ ಗಾಯನ ಸೇವೆ

ಬೆಂಗಳೂರು :ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಬೆಂಗಳೂರಿನ ಜಯನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದ ಪ್ರಯುಕ್ತ ಬೆಳಿಗ್ಗೆ ವಿಶೇಷ ಪೂಜಾ ಕೈಂಕರ್ಯಗಳು, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ, ಗಜವಾಹನೋತ್ಸವ ತೊಟ್ಟಿಲು ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವ ಗಾಯಕ ಶ್ರೀ ಮಾಧವ ಎಂ. ನಾಡಿಗೇರ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ತಾರತಮ್ಯೋಕ್ತವಾಗಿ ಮತ್ತು ಸುಶ್ರಾವ್ಯವಾಗಿ ಹಾಡಿ, ನೆರೆದಿದ್ದ ದಾಸಸಾಹಿತ್ಯಾಭಿಮಾನಿಗಳ ಮನಸೂರೆಗೊಂಡರು.
ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಶ್ರೀ ರಾಮು ಕೊಡೇಕಲ್, ತಬಲಾ ವಾದನದಲ್ಲಿ ಶ್ರೀ ಭೀಮಾಶಂಕರ ಹೇಮನೂರು ಮತ್ತು ತಾಳದಲ್ಲಿ ಮಾ|| ಆದಿತ್ಯ ಸಾಥ್ ನೀಡಿದರು. ಈ ಕಾರ್ಯಕ್ರಮಗಳು ಶ್ರೀಮಠದ ಹಿರಿಯ ವ್ಯವಸ್ಥಾಪಕ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ನೆರವೇರಿತು.











