--Ads--

ಕಲುಷಿತ ನೀರು, ಮಾಧ್ಯಮ ವರದಿ : ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಅನುರಾಧ ಭೇಟಿ

On: July 18, 2026 4:33 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕಲುಷಿತ ನೀರು, ಮಾಧ್ಯಮ ವರದಿ : ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಅನುರಾಧ ಭೇಟಿ

 

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.18:

ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಓವರ್ ಹೆಡ್ ಟ್ಯಾಂಕ್ ಮೂಲಕ ಕಲುಷಿತ ನೀರು ಸರಬರಾಜು ಆಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಲೋಕೋಪಯೋಗಿ ಇಲಾಖೆಯ ವತಿಯಿಂದ ಚಿಕ್ಕಬಳ್ಳಾಪುರ ರಸ್ತೆಯ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಮಾಡುವ ಸಂದರ್ಭದಲ್ಲಿ ನೀರು ಸರಬರಾಜು ಪೈಪ್ ಗೆ ಹಾನಿಯಾಗಿರುವುದರಿಂದ ಮಣ್ಣು ಮಿಶ್ರಿತ ನೀರು ಸಂಗ್ರಹವಾಗಿರುವುದು ಪರಿಶೀಲನೆ ಸಂದರ್ಭದಲ್ಲಿ ಕಂಡು ಬಂದಿದೆ.

ಆದ್ದರಿಂದ ಕೂಡಲೇ ಮಣ್ಣು ಮಿಶ್ರಿತ ನೀರು ಹೊರ ತೆಗೆದು ಟ್ಯಾಂಕ್ ಸ್ವಚ್ಛಗೊಳಿಸಿ ಶುದ್ಧ ನೀರು ಸರಬರಾಜು ಮಾಡಲು ಪುರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ಥಳದಲ್ಲೇ ಸೂಚಿಸಿದರು.

ನಂತರ ವಿಜಯಪುರ ಪಟ್ಟಣದಲ್ಲಿ ನೀರು ಸರಬರಾಜು ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಸಮರ್ಪಕ ಹಾಗೂ ಶುದ್ಧ ನೀರು ಸರಬರಾಜು ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ, ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್, ಪುರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

##############################

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜು.18:

“ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ” ನೀಡಲು ನಾಮ ನಿರ್ದೇಶನಗಳನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ದಿನಾಚರಣೆ-2026ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.

ರಾಜ್ಯ ಪ್ರಶಸ್ತಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ, ಸಂಸ್ಥೆಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುತ್ತದೆ.

ಆಸಕ್ತರು ತಮ್ಮ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಆ. 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:206, ಉಪನಿರ್ದೇಶಕರ ಕಛೇರಿ, ದೂ. ಸಂಖ್ಯೆ: 080-29787445 ಅಥವಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಸಿದ್ದಾರೆ.

 

WhatsApp

Join Now

Telegram

Join Now

Instagram

Join Now