--Ads--

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

On: July 21, 2026 4:03 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವಿಳಂಬ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಬೆಂಗಳೂರು ಜುಲೈ 21: ರಾಜ್ಯದ ವಿವಿಧ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ವಿಳಂಬ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿ ಎಚ್ಚರಿಕೆ ನೀಡಿದರು

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ವಿವಿಧ ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಯಮಿತವಾಗಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಿ, ನಿಗದಿಪಡಿಸಿದ ಕಾಲಮಿತಿಯೊಳಗೆ ಪ್ರತಿಯೊಂದು ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸ್ಪಷ್ಟಪಡಿಸಿದರು.

ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಉದ್ದೇಶಪೂರ್ವಕವಾಗಿ ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಶ್ವ ಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ಸಚಿವರುತಿಳಿಸಿದರು.

ಬೆಳಗಾವಿಯ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದ ಕಾಮಗಾರಿಗಳನ್ನು 2027ರ ಜೂನ್ ವೇಳೆಗೆ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ : ಕರ್ನಾಟಕದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ KUIDFC ಹಲವು ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅವುಗಳ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್‌ಗಳಾದ ಜೆ.ಆರ್. ನಂದೀಶ್, ಕೆ.ಪಿ. ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಜುಲೈ 21:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾವಿದರು, ಕಲಾ ಸಂಘ ಸಂಸ್ಥೆಗಳು, ಸಾಹಿತಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯಾಧ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ,ಜಾನಪದ, ನೃತ್ಯ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಕಧನ ನೀಡಲಾಗುತ್ತದೆ.

ಅರ್ಹರು www.sevasindhu.karnataka.gov.in ವೆಬ್ಸೈಟ್ ನಲ್ಲಿ ಆಗಸ್ಟ್ 20 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-24410574/ 22213530/ 22241325, ಮೊ.ಸಂ 9986837037 ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಲೆಕ್ಸಸ್ ಇಂಡಿಯಾದಿಂದ ತನ್ನ ಹೊಚ್ಚಹೊಸ ಇ.ಎಸ್.359 ಎಚ್ ಬುಕಿಂಗ್ ಗಳು ಪ್ರಾರಂಭ

ನಗರ ಭೂ ಸಾರಿಗೆ ನಿರ್ದೇಶನಾಲಯದ ಅಧಿಕಾರಿಗಳೊಂದಿಗೆ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಸಭೆ

ತ್ರೈಮಾಸಿಕದ ಫಲಿತಾಂಶಗಳನ್ನು ಪ್ರಕಟಿಸಿದ ವಿಪ್ರೋ… ಐಟಿ ಸೇವಾ ವಿಭಾಗದ ಆದಾಯವು ವರ್ಷದಿಂದ ವರ್ಷಕ್ಕೆ 1% ರಷ್ಟು ಹೆಚ್ಚಳ, ನಿವ್ವಳ ಆದಾಯವು ₹3360 ಕೋಟಿಗೆ ಏರಿಕೆ

ಕರ್ನಾಟಕದಲ್ಲಿ ಅಕ್ರಮ ಕೇರಳ ಲಾಟರಿ ಹಾವಳಿ ತಕ್ಷಣ ನಿಲ್ಲಿಸಿ , ರಾಜ್ಯ ಲಾಟರಿ ಯೋಜನೆ ಮರು ಜಾರಿಗೊಳಿಸಿ: ಕರ್ನಾಟಕ ರಾಜ್ಯ ಲಾಟರಿ ಚಿಲ್ಲರೆ ಮಾರಾಟಗಾರರ ಸಂಘ ಆಗ್ರಹ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ: ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಎಚ್ಚರಿಕೆ 

ದಿ ಪರ್ಪಲ್ ಟರ್ಟಲ್ಸ್’, ‘ಬೆರುರು’ ಮತ್ತು ‘ಊರ್ಜಾ’ ದಿಂದ ಬೆಂಗಳೂರಿನಲ್ಲಿ ವಾರ್ಷಿಕ ಮಾರಾಟ ಮೇಳ 2026 ಘೋಷಣೆ