ವಿಜಯ ದರ್ಪಣ ನ್ಯೂಸ್…
ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆ ಸ್ಥಾಪನೆಗೆ ಬಳಸಿಕೊಳ್ಳಿ : ಸೀಕಲ್ ಆನಂದಗೌಡ

ಶಿಡ್ಲಘಟ್ಟ : ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆ ಸ್ಥಾಪನೆಗೆ ಬಳಸಿಕೊಳ್ಳಿ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳುವುದನ್ನು ಬಿಡಿ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ ಆಗ್ರಹಿಸಿದರು.
ತಾಲ್ಲೂಕಿನ ಬಶೆಟ್ಟಿಹಳ್ಳಿ ಹೋಬಳಿಯಲ್ಲಿ “ಎಸ್‌ಐಆರ್ ಜಾಗೃತಿ ಕಾರ್ಯಾಗಾರ” ದಲ್ಲಿ ಅವರು
ಮಾತನಾಡಿದರು.
ಕೃಷಿ ಭೂಮಿಯನ್ನು ಈಗಾಗಲೇ ಕೈವಾರ ಸಮೀಪ
ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಂಡು ವರ್ಷಗಳೇ ಕಳೆದರೂ ಅಲ್ಲಿನ ಜಮೀನುಗಳಲ್ಲಿ ನಿರಿಕ್ಷಸಿದಷ್ಟು ಕೈಗಾರಿಕೆಗಳು ಆರಂಭವಾಗಿಲ್ಲ ಇಂತಹ ಸಂದರ್ಭದಲ್ಲಿ ಮತ್ತಷ್ಟು ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
ಜಂಗಮಕೋಟೆ ಭಾಗದ ಕೈಗಾರಿಕೆಗಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದರು.
ಸರ್ಕಾರಿ ಹಾಗು ಫಲವಿತ್ತಿಲ್ಲದ ಜಮೀನುಗಳಲ್ಲಿ ಕೈಗಾರಿಕೆ ಸ್ಥಾಪಿಸಿದರೆ ಕೃಷಿ ಭೂಮಿ ಉಳಿಯುವುದರ ಜೊತೆಗೆ ಉದ್ಯೋಗಾವಕಾಶ ಸ್ಥಳೀಯರಿಗೆ ಸೃಷ್ಟಿಯಾಗಲಿವೆ ಎಂದರು.
ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಿ ಮರಳಿ ಸಂಗ್ರಹಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.
ಮತದಾರರ ಪಟ್ಟಿಯಲ್ಲಿ ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಮಾಹಿತಿ ಕಂಡುಬಂದರೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಮುಂದಿನ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಹೇಳಿದರು.
ಈ ವೇಳೆ ಆ ಬಾಗದ ಪ್ರಮುಖ ಮುಖಂಡರು ,ಕಾರ್ಯಕರ್ತರು ಪಾಲ್ಗೊಂಡಿದ್ದರು.









