--Ads--

ಮಹಿಳೆಯರಿಗೆ ಹೊಲಿಗೆ ಯಂತ್ರ,ವಿವಿಧ ಯೋಜನೆಗಳ  ಉಪಕರಣಗಳ ಕಿಟ್ ವಿತರಣೆ : ಶಾಸಕ ಬಿ.ಎನ್.ರವಿಕುಮಾ‌ರ್

On: July 23, 2026 4:08 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಮಹಿಳೆಯರಿಗೆ ಹೊಲಿಗೆ ಯಂತ್ರ ,ವಿವಿಧ ಯೋಜನೆಗಳ  ಉಪಕರಣಗಳ ಕಿಟ್ ವಿತರಣೆ : ಶಾಸಕ ಬಿ.ಎನ್.ರವಿಕುಮಾ‌ರ್

ಶಿಡ್ಲಘಟ್ಟ : ಜನ ಸಾಮಾನ್ಯರ ಪರವಾದ ಯೋಜನೆಗಳನ್ನು ಸರ್ಕಾರ ನೀಡಿದಾಗ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಕಾರಿಗಳು ಹಾಗೂ ಜನಪ್ರತಿನಿಗಳು ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ನಡೆದ ತಾಲೂಕು ಪಂಚಾಯಿತಿ ಹಾಗೂ ಕೈಗಾರಿಕೆ ಇಲಾಖೆಯಿಂದ ೧೧೧ ಮಹಿಳೆಯರಿಗೆ ಹೊಲಿಗೆ ಯಂತ್ರಗಳು ಹಾಗೂ ೬೪ ಮಂದಿ ಕುಶಲಕರ್ಮಿಗಳಿಗೆ ಉಪಕರಣಗಳ ಕಿಟ್ ವಿತರಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸೌಲಭ್ಯಗಳನ್ನು ಪಡೆದ
ಪಲಾನುಭವಿಗಳು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಡವಾಗಬೇಕೆಂದು ಮನವಿ ಮಾಡಿದರು.

೨೦೨೬-೨೭ನೇ ಸಾಲಿನ ಯೋಜನೆಗಳಿಗೆ ಅರ್ಹರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಕೈಗಾರಿಕಾ ವಿಸ್ತರಣಾಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಇದೇ ವೇಳೆ ಕಾರ್ಮಿಕ ಇಲಾಖೆಯಿಂದ ೯೫ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೧೬ ಸೇರಿ ಒಟ್ಟು ೧೧೧ ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಬಡಗಿ, ಗಾರೆ, ದೋಭಿ, ಕ್ಷೌರಿಕ, ಕಮ್ಮಾರಿಕೆ ಹಾಗೂ ಕಲ್ಲು ಕೆಲಸ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ ೬೪ ಮಂದಿ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ಕಿಟ್ ಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆ ಜಿಲ್ಲಾ ಉಪನಿರ್ದೇಶಕ ಟಿ.ಮುಕುಂದ, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಕೈಗಾರಿಕಾ ವಿಸ್ತರಣಾ ಅಧಿಕಾರಿ ಗೀತಾ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ ಮತ್ತು ಹುಜಗೂರು ರಾಮಣ್ಣ, ತಾಲ್ಲೂಕು ಪಂಚಾಯತಿ ಮಾಜಿ ಅದ್ಯಕ್ಷ ರಾಜಶೇಖರ್,ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಮುಖಂಡರಾದ ತಾದೂರು ರಘು, ಮೇಲೂರು ಮಂಜುನಾಥ್ ,
ಕುಂದಲಗುರ್ಕಿ ಚಂದ್ರು ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now