--Ads--

ಭುಜಗಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

On: July 23, 2026 4:13 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಭುಜಗಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ.

ತಾಂಡವಪುರ ಜುಲೈ 23 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲೂಕಿನ ಭುಜಗಯ್ಯನಹುಂಡಿ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ₹20 ಲಕ್ಷ ರೂ ವೆಚ್ಚದ ಭೂಮಿ ಪೂಜೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ರವರು ನೆರವೇರಿಸಿದರು

ಬಳಿಕ ಮಾತನಾಡಿದ ಶಾಸಕರು ಈ ಭಾಗದ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಇದಾಗಿದ್ದು ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹಂತ ಹಂತವಾಗಿ ಶ್ರಮಿಸುವುದಾಗಿ ತಿಳಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್ , ಜಿಲ್ಲಾ ಮಹಿಳಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು ಆದ ಲತಾ ಸಿದ್ದಶೆಟ್ಟಿ ರಾಜ್ಯ ST ಘಟಕದ ಪ್ರಧಾನ ಕಾರ್ಯದರ್ಶಿ ದೊರೆಸ್ವಾಮಿ ನಾಯಕ , ಪ್ರದೀಪ್ , ಸಿದ್ದಶೆಟ್ಟಿ , ವೀರೇಂದ್ರ , ಗೀತಾ , ದೇವರಾಜ್ , ಬೆಳ್ಳಪ್ಪ ರಾಜಪ್ಪ ಸೇರಿದಂತೆ ಹಲವು ಮುಖಂಡರು ಗ್ರಾಮಸ್ಥರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now