ವಿಜಯ ದರ್ಪಣ ನ್ಯೂಸ್….
ಸಾರ್ವಜನಿಕರಿಗೆ ಜಾತಿ, ಆದಾಯ ಸೇವೆಗಳನ್ನು ಸಮಯಕ್ಕೆ ಒದಗಿಸಲು ಕಂದಾಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಸೂಚನೆ

ತಾಂಡವಪುರ ಜುಲೈ 24 ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ ಇತರೆ ದೃಢೀಕರಣ ಪತ್ರಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಶೀಘ್ರ ನಿವಾರಿಸಿ, ಸೇವೆಗಳನ್ನು ಸಮಯಕ್ಕೆ ಒದಗಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಸೂಚನೆ ನೀಡಿದರು
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ಸಾರ್ವಜನಿಕರಿಗೆ ಜಾತಿ, ಆದಾಯ ಹಾಗೂ ಇತರೆ ದೃಢೀಕರಣ ಪತ್ರಗಳ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಶೀಘ್ರ ನಿವಾರಿಸಿ, ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಂತೆ ಸೂಚನೆ ನೀಡಿದರು
ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲರ ವೇತನದ ಅರ್ಜಿಗಳನ್ನು ಶೀಘ್ರವಾಗಿ ಪರಿಶೀಲಿಸಿ, ಫಲಾನುಭವಿಗಳಿಗೆ ಸಮಯಕ್ಕೆ ಸೇವೆ ಒದಗಿಸುವಂತೆ ಸೂಚನೆ ನೀಡಿದ ಶಾಸಕರು ಮತ್ತು ತಾಲ್ಲೂಕು ಕಚೇರಿ ಆವರಣ ಹಾಗೂ ಕಚೇರಿಗಳನ್ನು ಸ್ವಚ್ಛವಾಗಿ ನಿರ್ವಹಿಸಿ ಸಾರ್ವಜನಿಕರಿಗೆ ಉತ್ತಮವಾದ ವಾತಾವರಣವನ್ನು ಕಾಪಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
ಈ ಸಂದರ್ಭದಲ್ಲಿ ತಹಸೀಲ್ದಾರ್ ಸ್ಮಿತಾ ರಾಮು , ನಗರಸಭೆಯ ಪೌರಾಯುಕ್ತ ಬಸವರಾಜ್ , ಇಒ ಜೆರಾಲ್ಡ್ ರಾಜೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.











