ವಿಜಯ ದರ್ಪಣ ನ್ಯೂಸ್….
ಮೈಸೂರು ನಗರವನ್ನು ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಜುಲೈ 24ಮೈಸೂರು ನಗರವನ್ನು ಮುಂದಿನ ಪೀಳಿಗೆಗೆ ಸೂಕ್ತವಾದ ಸಮೃದ್ಧ, ಸ್ವಾವಲಂಬಿ, ಆಧುನಿಕ, ಸುಸ್ಥಿರ ಹಾಗೂ ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರು ಆದ ಡಾ ಯತೀಂದ್ರ ಸಿದ್ದರಾಮಯ್ಯ ರವರು ಸಾಂಸ್ಕೃತಿಕ ನಗರಿ ಮೈಸೂರು ಅಭಿವೃದ್ಧಿ ಕುರಿತು ಇಂದು ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಸಚಿವರು
ಸಮಗ್ರ ಅಭಿವೃದ್ಧಿಯೋಜನಾ ನಕ್ಷೆಯನ್ನು(Master Plan) ಸಿದ್ಧಪಡಿಸಲಾಗಿದೆ. ಎಂದು ತಿಳಿಸಿದರು
ಈ ಬೃಹತ್ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಸಭೆಯಲ್ಲಿಭಾಗವಹಿಸಿ ಸಮಗ್ರ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದುಕೊಂಡರು.
ಈ ಯೋಜನೆಯನ್ನು ಮುಂಚೂಣಿಗೆ ತರಲು ಉದ್ಯಮ, ನಿಪುಣ, ಎಂದುಸುಖವಾಸಿ, ಪ್ರವಾಸೋದ್ಯಮ ಮತ್ತು ಸಂಚಾರ ಮೈಸೂರು ಎಂಬ ಐದು ಪ್ರಮುಖ ಕ್ಷೇತ್ರಗಳ ಮೇಲೆ ಗಮನಹರಿಸಿ ಕಾರ್ಯರೂಪಕ್ಕೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.
ಸಭೆಯಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶ್ರೀಮತಿ ಬಿ. ಬಿ. ಕಾವೇರಿ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.










