ವಿಜಯ ದರ್ಪಣ ನ್ಯೂಸ್…
ಗ್ರಾಮಗಳ ಮೂಲಸೌಲಭ್ಯ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಜುಲೈ 28 ಗ್ರಾಮೀಣ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ 50 ಕೋಟಿ ಅನುದಾನ ತಂದು ಪ್ರತಿ ಗ್ರಾಮದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಗ್ರಾಮಗಳ ಮೂಲ ಸೌಕರ್ಯಕ್ಕೆ ಹೆಚ್ಚು ಶ್ರಮಿಸುವುದಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಲ್ಲೂಕಿನ ಹೆಚ್ ಕೊಂಗಳ್ಳಿ ಗ್ರಾಮದಲ್ಲಿ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಎಲಚ್ಚಗೆರೆ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೂಡ್ಲಾ ಪುರ ಗ್ರಾಮದಲ್ಲಿ 60 ಲಕ್ಷ ರೂ ವೆಚ್ಚದ ಸಿಸಿ ರಸ್ತೆ, ಮಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದ ಇಲಾಖೆಯ 50 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಜೊತೆಗೆ ಎಲ್ಲಾ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ.ಈ ಸಾಲಿನಲ್ಲಿ ನನ್ನ ಕ್ಷೇತ್ರಕ್ಕೆ 50 ಕೋಟಿ ಅನುದಾನ ನೀಡಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ.
ಕ್ಷೇತ್ರದ ಗ್ರಾಮಗಳ ಅಭಿವೃದ್ಧಿಗಾಗಿ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಸಮರ್ಪಕವಾಗಿ ಅನುದಾನ ನೀಡಿದ್ದು ಈಗಾಗಲೇ ಗ್ರಾಮೀಣ ಭಾಗಗಳಲ್ಲಿ ಕಾಮಗಾರಿಗಳು ನಡೆಯುತ್ತಿದ್ದು ಅದನ್ನು ಗುಣಮಟ್ಟದ ಕಾಮಗಾರಿಯಾಗಿ ನಡೆಸಲು ಪ್ರತಿಯೊಬ್ಬರು ಸಹಕರಿಸಬೇಕು.ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ನಾನು ಪ್ರಾಮಾಣಿಕವಾಗಿ ಶ್ರಮಿಸುತ್ತೆನೆ.
ಕ್ಷೇತ್ರದ ಪ್ರತಿ ಗ್ರಾ ಮಗಳಲ್ಲಿ ಉಳಿದಿರುವ ಕಾಮಗಾರಿಯನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲು ಶ್ರಮಿಸುತ್ತೆನೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಬ್ಲಾಕ್ ಅದ್ಯಕ್ಷ ಕುರಹಟ್ಟಿ ಕೆ ಜಿ ಮಹೇಶ್, ಹಿರೇಹಳ್ಳಿ ಸೋಮೇಶ್, ರಾಜು, ಗೋವಿಂದರಾಜು, ನಿರ್ಮಿತಿ ಕೇಂದ್ರದ ಇಂಜಿನಿಯರ್ ಯಶವಂತ್,ಕೆ ಮಾದಪ್ಪ,ಸೇರಿದಂತೆ ಪ್ರಮುಖರು ಹಾಜರಿದ್ದರು











