ವಿಜಯ ದರ್ಪಣ ನ್ಯೂಸ್…
ಹಲಗಾ 70 MLD ಒಳಚರಂಡಿ ಸಂಸ್ಕರಣಾ ಘಟಕದ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ ಜುಲೈ 28: ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ 70 MLD (ಮಿಲಿಯನ್ ಲೀಟರ್ ಪ್ರತಿದಿನ) ಸಾಮರ್ಥ್ಯದ ಒಳಚರಂಡಿ ಸಂಸ್ಕರಣಾ ಘಟಕ (STP) ಕಾಮಗಾರಿಯ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲೆ ಚಾಮರಾಜನಗರ ಜಿಲ್ಲೆ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯೋಜನೆಯ ಪ್ರಗತಿ, ಗುಣಮಟ್ಟ ಹಾಗೂ ತಾಂತ್ರಿಕ ಅಂಶಗಳನ್ನು ಸ್ಥಳದಲ್ಲೇ ಪರಿಶೀಲಿಸಿದ ಸಚಿವರು, ಕಾಮಗಾರಿಯು ಶೇಕಡಾ 90ರಷ್ಟು ಪೂರ್ಣಗೊಂಡಿದ್ದು, ಉಳಿದಿರುವ ಸಣ್ಣಪುಟ್ಟ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಯೋಜನೆಯನ್ನು ಸಾರ್ವಜನಿಕ ಬಳಕೆಗೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಚಿವರುಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಘಟಕದ ಅನುಷ್ಠಾನದ ಪ್ರಗತಿ, ತಾಂತ್ರಿಕ ವೈಶಿಷ್ಟ್ಯಗಳು ಹಾಗೂ ಕಾರ್ಯನಿರ್ವಹಣೆಯ ಕುರಿತಂತೆ ಅಧಿಕಾರಿಗಳಿಂದ ಸಚಿವರು ಸಮಗ್ರ ಮಾಹಿತಿ ಪಡೆದುಕೊಂಡರು.
ನಗರದಲ್ಲಿ ವೈಜ್ಞಾನಿಕ ಒಳಚರಂಡಿ ನಿರ್ವಹಣೆ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯನ್ನುಜಿ ಬಲಪಡಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ ಎಂದು ಸಚಿವರು ತಿಳಿಸಿದರು.
ಪರಿಶೀಲನಾ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಯೋಜನೆಯ ಇಂಜಿನಿಯರ್ಗಳು ಉಪಸ್ಥಿತರಿದ್ದರು.






