--Ads--

ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ : ಕಲಾವಿದೆ ಶ್ರೀಮತಿ ಆರ್.ಕೆ.ಸ್ಪರ್ಶ

On: July 31, 2026 1:53 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ : ಕಲಾವಿದೆ ಶ್ರೀಮತಿ ಆರ್.ಕೆ.ಸ್ಪರ್ಶ

ಬೆಂಗಳೂರು : ಶೇಷಾದ್ರಿಪುರಂ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 30 ಜುಲೈ 2026ರಂದು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಕಾರ್ಯಕ್ರಮವನ್ನು ಗಾಯಕಿ ,ನಟಿ ,ಕಂಠದಾನ ಕಲಾವಿದೆ ಶ್ರೀಮತಿ ಸ್ಪರ್ಶ ಆರ್. ಕೆ . ಅವರು ಉದ್ಘಾಟಿಸಿ ಮಾತನಾಡುತ್ತ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸದೊಂದಿಗೆ ಕಲೆಯು ಮಹತ್ತರ ಪಾತ್ರವನ್ನು ವಹಿಸುತ್ತದೆ .ಒಬ್ಬ ವ್ಯಕ್ತಿಯನ್ನು ಮನುಷ್ಯನನ್ನಾಗಿ ರೂಪಿಸುವಲ್ಲಿ ಕಲೆಯ ಪಾತ್ರ ದೊಡ್ಡದು ವಿದ್ಯಾರ್ಥಿಗಳು ಪರೀಕ್ಷೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಪ್ರಾಂಶುಪಾಲ ಪ್ರೊಫೆಸರ್ ಆರ್ .ಪ್ರಶಾಂತ್ ಅವರು ವಿದ್ಯಾರ್ಥಿಗಳಲ್ಲಿ ಸಂಸ್ಕೃತಿಯನ್ನು ಬೆಳೆಸುವುದರಲ್ಲಿ ಪೋಷಕರ ಮತ್ತು ಮನೆಯ ವಾತಾವರಣ ಬಹಳ ಮುಖ್ಯ. ಜೀವನದಲ್ಲಿ ಯಶಸ್ಸನ್ನು ಗಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಯ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ.ಹೆಚ್.ಕಾವ್ಯಶ್ರೀ, ಸಿಬ್ಬಂದಿ ಕಾರ್ಯದರ್ಶಿಗಳಾದ ಬಿ.ಎಂ.ಮಹಾಂತೇಶ್, ಶ್ರೀಮತಿ ಸಹನಾ.ಎಸ್. ವೇದಿಕೆಯಲ್ಲಿದ್ದರು.

ಸಾಂಸ್ಕೃತಿಕ ಸಮಿತಿ ಸದಸ್ಯರು , ಉಪನ್ಯಾಸಕರು , ಕಚೇರಿ ಸಿಬ್ಬಂದಿ ಸಮಾರಂಭದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳ ಜಾನಪದ ನೃತ್ಯ ಪ್ರದರ್ಶನ , ದೇವರ ನಾಮ ಗೀತ ಗಾಯನವು ಸಮಾರಂಭದಲ್ಲಿ ಭಾಗವಹಿಸಿದ್ದವರ ಮನ ಸೂರೆಗೊಂಡವು.

&&&&&&&&&&&&&&&&&&&&&&&&&&&&

“ಶ್ರೀ ಜಯತೀರ್ಥರ ಜೀವನ ಮತ್ತು ಸಾಧನೆ” ಧಾರ್ಮಿಕ ಪ್ರವಚನ

ಬೆಂಗಳೂರು : ಶ್ರೀ ರಾಘವೇಂದ್ರ ಸೇವಾ ಸಮಿತಿ ಮತ್ತು ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಇವುಗಳ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 1 ರಿಂದ 6ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಮ||ಶಾ||ಸಂ|| ಶ್ರೀ ಚಂದ್ರಶೇಖರ ಆಚಾರ್ಯರಿಂದ ಶ್ರೀ ಜಯತೀರ್ಥರ ಆರಾಧನೆ ಪ್ರಯುಕ್ತ “ಶ್ರೀ ಜಯತೀರ್ಥರ ಜೀವನ ಮತ್ತು ಸಾಧನೆ” ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.

ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು-560003

WhatsApp

Join Now

Telegram

Join Now

Instagram

Join Now