--Ads--

80ನೇ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ ಕೆ ಎನ್ ಅನುರಾಧ 

On: August 4, 2026 6:41 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

80ನೇ ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ: ಜಿಲ್ಲಾಧಿಕಾರಿ ಡಾ ಕೆ ಎನ್ ಅನುರಾಧ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 04:

ಆಗಸ್ಟ್ 15ರಂದು ನಡೆಯಲಿರುವ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಗಸ್ಟ್ 15ರಂದು ಬೆಳಗ್ಗೆ 7.30 ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಯಾವುದೇ ನಿಯಮಗಳು ಉಲ್ಲಂಘನೆಯಾಗಂದತೆ ಹಾಗೂ ಸರ್ಕಾರದ ಶಿಷ್ಠಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ವಾತಂತ್ರ್ಯ ದಿನಾಚರಣೆಗೂ ಹಿಂದಿನ ಮೂರು ದಿನಗಳು ಕ್ರೀಡಾಂಗಣದಲ್ಲಿ ಪೂರ್ವಾಭ್ಯಾಸ ಮಾಡುವ ಮಕ್ಕಳಿಗೆ, ಸಿಬ್ಬಂದಿಗಳಿಗೆ ಅಗತ್ಯ ಕುಡಿಯುವ ನೀರು, ಗುಣಮಟ್ಟದ ಆಹಾರ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಮುಂಭಾಗ ಧ್ವಜ ಕಟ್ಟೆ ಸಿದ್ದಪಡಿಸುವಿಕೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ಅಗ್ನಿಶಾಮಕ, ಆಂಬುಲೆನ್ಸ್ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ , ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now