--Ads--

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

On: August 9, 2026 4:31 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ : ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

ತಾಂಡವಪುರ ಆಗಸ್ಟ್ ಐದು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರಕ್ಕೆ ನೂರರಷ್ಟು ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿ ಚಿಕ್ಕಯ್ಯನ ಛತ್ರ ಹೋಬಳಿಯ ಬಿ ಎಲ್ ಓ ಕಂದಾಯ ಅಧಿಕಾರಿ ಅಂಗನವಾಡಿ ಕಾರ್ಯಕರ್ತೆಗೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರು ಸನ್ಮಾನಿಸಿ ಗೌರವಿಸಿದರು

ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಸರಳವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಚಿಕ್ಕಯನ ಛತ್ರ ಹೋಬಳಿಯ ಬಿ ಎಲ್ ಓ ಹಾಗೂ ಕಂದಾಯ ಅಧಿಕಾರಿಯಾದ ಸರ್ವೇಶ್ ಹಾಗೂ ಬಂಚಳ್ಳಿ ಅಂಗನವಾಡಿ ಕಾರ್ಯಕರ್ತೆ ಯನ್ನು ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡ ಬಿ ಎಂ ರಾಮು ರವರು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸಿದರು

ಬೆಳಿಕ ಮಾತನಾಡಿದ ರಾಮು ಅವರು ನಮ್ಮ ವರುಣ ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯಕ್ರಮ ಯಶಸ್ವಿಯಾಗಲು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಎಸ್ ಯತೀಂದ್ರ ಸಿದ್ರಾಮಯ್ಯರ ಸಹಕಾರ ಮುಖ್ಯ ಕಾರಣ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳು ಸಚಿವರಿಗೆ ಈ ಕಾರ್ಯಕ್ರಮದ ಬಗ್ಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದ ಪರಿಣಾಮವಾಗಿ ನಮ್ಮ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ನೂರಕ್ಕೆ ನೂರರಷ್ಟು ಯಾವುದೇ ಗೊಂದಲವಿಲ್ಲದೆ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಂ ಮಹದೇವ್ ಮುಖಂಡ ಎಂ ಹುಚ್ಚೇಗೌಡ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಪ್ರಭು ಮುಖಂಡರಾದ ಮದನ್ಅಣ್ಣಯ್ಯ ಆರ್ಕೆಶ್ ಬಿಬಿ ಕುಮಾರ್ ನಟರಾಜು ಪುಟ್ಟರಾಜು ರವಿ ಕಾರ್ಮಿಕ ಮುಖಂಡ ಶಂಕರ್ ಜವನೇಗೌಡ ಪಚ್ಚೆಯ ಸೇರಿದಂತೆ ಇನ್ನೂ ಅನೇಕ ಮುಖಂಡರುಗಳು ಈ ಈ ಸಂದರ್ಭದಲ್ಲಿ ಹಾಜರಿದ್ದರು

WhatsApp

Join Now

Telegram

Join Now

Instagram

Join Now