--Ads--

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಪರಿಶೀಲನೆ 

On: August 9, 2026 4:58 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

 ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಪರಿಶೀಲನೆ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆ.07 : ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬರಪರಿಸ್ಥಿತಿ ಸಂಬಂಧ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಇದುವರೆಗೆ ದಾಖಲಾಗಿರುವ ಮಳೆಯ ಪ್ರಮಾಣ, ತಾಲ್ಲೂಕುವಾರು ಮಳೆ ಕೊರತೆಯ ಸ್ಥಿತಿ ಹಾಗೂ ಮುಂಗಾರು ಹಂಗಾಮಿನ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಕೃಷಿ ಇಲಾಖೆಯ ವತಿಯಿಂದ ಮುಂಗಾರು ಬಿತ್ತನೆ ಪ್ರಗತಿ, ಬೆಳೆಗಳ ಪ್ರಗತಿ, ಬೆಳೆಗಳ ಸ್ಥಿತಿ, ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಲಭ್ಯತೆ, ಬೆಳೆಹಾನಿ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಲಾಯಿತು.

ಈಗಾಗಲೇ ಹಲವು ಭಾಗಗಳಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದು ಮಳೆ ಕೊರತೆಯಿಂದ ರಾಗಿ ಬೆಳೆದಿಲ್ಲ. ಅಧಿಕಾರಿಗಳು ರೈತರ ಮನವೊಲಿಸಿ ಬೆಳೆ ವಿಮೆಗೆ ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದರು. ಯಾವೊಬ್ಬ ರೈತ ಕೂಡ ಬೆಳೆ ವಿಮೆ ವಂಚಿತರಾಗಬಾರದು. ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ, ಮಳೆ ಅಭಾವ ಸೃಷ್ಟಿ ಆದಲ್ಲಿ ನಷ್ಟ ಪರಿಹಾರ ಸಿಗಲಿದೆ ಎಂದರು.

ಕುಡಿಯುವ ನೀರಿನ ಲಭ್ಯತೆ, ಪರ್ಯಾಯ ನೀರು ಪೂರೈಕೆ ವ್ಯವಸ್ಥೆಗಳು ಹಾಗೂ ನೀರಿನ ಮೂಲಗಳ ಸಂರಕ್ಷಣೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಯ ಕೊರತೆಯಿಂದ ತಾಲ್ಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು ಕೂಡಲೆ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ರೈತರಿಗೆ ಮನವಿ ಮಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಮಳೆ ಹಾಗೂ ಬೆಳೆ ಹಾನಿ ವರದಿಗಳನ್ನು ಪರಿಶೀಲಿಸಿದ ಬಳಿಕ ಆಗಸ್ಟ್ ಕೊನೆಯ ವಾರದಲ್ಲಿ ಬರ ಪರಿಹಾರದ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ಸರ್ಕಾರವು ರೈತರ ಬೆಂಬಲಕ್ಕೆ ನಿಲ್ಲಲಿದ್ದು, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ ವೈಜ್ಞಾನಿಕವಾಗಿ ಇಂಗು ಗುಂಡಿಗಳನ್ನು ತಯಾರು ಮಾಡಿ ಅಂತರ್ಜಲ ಮಟ್ಟವನ್ನು ಹೆಚ್ಚಾಗಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬೆಳೆಯು ಮಳೆಯ ಮೇಲೆ ಅವಲಂಬಿತವಾಗಿದ್ದು 10% ಬಿತ್ತನೆ ಮಾತ್ರವಾಗಿದೆ. ಕೆರೆಯಲ್ಲಿ ನೀರು ತುಂಬಿಸಿ ನೀರು ಶೇಖರಣೆ ಮಾಡಬೇಕು. ಕೆರೆಯಲ್ಲಿ ಬುಡ ಸಮೇತ ಮರಗಳನ್ನು ತೆರವುಗೊಳಿಸಿ ಕೆರೆಯನ್ನು ಸ್ವಚ್ಛ ಗೊಳಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಡಾ ಕೆ.ಎನ್ ಅನುರಾಧ, ಸಿಇಒ ಡಾ. ವಾಸಂತಿ ಅಮರ್ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now