--Ads--

ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು : ಡಾ.ಪಲಕ್ ವರ್ಮ 

On: August 10, 2026 3:53 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು : ಡಾ.ಪಲಕ್ ವರ್ಮ 

ಶಿಡ್ಲಘಟ್ಟ : ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಹಿತದೃಷ್ಟಿಯಿಂದ ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಎಐಸಿಸಿ ಉಸ್ತುವಾರಿ ಡಾ.ಪಲಕ್ ವರ್ಮ ಅವರು ಮನವಿ ಮಾಡಿದರು.

ನಗರದ ಕಾಂಗ್ರೆಸ್‌ ಭವನದಲ್ಲಿ ಆಯೋಜಿಸಿದ್ದ ‘ಸಂಘಟನ್ ಸೃಜನ ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ರಾಷ್ಟ್ರೀಯ ಹಾಗೂ ಐತಿಹಾಸಿಕ ಪಕ್ಷ ಪಕ್ಷದಲ್ಲಿ ಅಶಿಸ್ತಿಗೆ ಯಾವುದೇ ಅವಕಾಶವಿಲ್ಲ ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ,ಪಕ್ಷದ ಶಿಸ್ತಿನ ವಿಚಾರವನ್ನು ಪದೇ ಪದೇ ಪ್ರಸ್ತಾಪಿಸಿದ ಅವರು ನೇರವಾಗಿ ಎಚ್ಚರಿಕೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಭಾಗವಾಗಿ ಪಕ್ಷದ ಪ್ರಮುಖ ಮುಖಂಡರು ಹಾಗೂ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವವರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಯಿತು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು, ನಗರಸಭೆ ಮಾಜಿ ಸದಸ್ಯರು ಮತ್ತು ಪಕ್ಷದ ಪ್ರಮುಖ ಮುಖಂಡರಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಆಯ್ಕೆ ಕುರಿತು ಅಭಿಪ್ರಾಯ ಪಡೆಯಲಾಯಿತು.

ಈ ಪ್ರಕ್ರಿಯೆ ವೇಳೆ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಪ್ರತ್ಯೇಕವಾಗಿ ದಾಖಲಿಸಿದರು,ಜಿಲ್ಲಾ ಮಟ್ಟದಲ್ಲಿ ಪಕ್ಷದ ಸಂಘಟನೆ ಬಲಪಡಿಸಲು ಸಮರ್ಥ ನಾಯಕತ್ವದ ಅಗತ್ಯದ ಬಗ್ಗೆಯೂ ಮುಖಂಡರು ಚರ್ಚಿಸಿದರು.

ಅಭಿಪ್ರಾಯ ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಮುಖಂಡ ಆಂಜಿನಪ್ಪ (ಪುಟ್ಟು) ಮಾತನಾಡಿ ,
ತಮ್ಮ ,ತಮ್ಮ ಅಭಿಪ್ರಾಯಗಳನ್ನು ಸಂಯಮವಾಗಿ ನೀಡಿ ಪಕ್ಷದ ಶಿಸ್ತನ್ನು ಕಾಪಾಡಿ ಎಂದು ಮುಖಂಡರಲ್ಲಿ ಅವರು ಮನವಿ ಮಾಡಿದರು,ಸಭೆಯು ಮುಗಿಯುವ ಮುನ್ನವೇ ತಮ್ಮ ಖಾಸಗಿ ಕಾರ್ಯಕ್ರಮವಿರುವುದಾಗಿ ತಿಳಿಸಿ ಸ್ಥಳದಿಂದ ಅವರು ತೆರಳಿದರು.

ಇದೇ ವೇಳೆ ಪಕ್ಷದ ಸಂಘಟನಾ ಬಲವರ್ಧನೆ, ಬೂತ್ ಮಟ್ಟದ ಕಾರ್ಯಚಟುವಟಿಕೆಗಳ ಪರಿಣಾಮಕಾರಿ ಅನುಷ್ಠಾನ, ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆ ಹಾಗೂ ಜನರೊಂದಿಗೆ ಇನ್ನಷ್ಟು ನಿಕಟವಾಗಿ ಸಂಪರ್ಕ ಸಾಧಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು.

ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದ ಇದೇ ‘ಸಂಘಟನ್ ಸೃಜನ ಅಭಿಯಾನ’ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಮಾಜಿ ಶಾಸಕ ಡಾ. ಎಂ.ಸಿ. ಸುಧಾಕರ್ ಹಾಗೂ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು,ಈ ವೇಳೆ ತಳ್ಳಾಟ, ನೂಕಾಟ ಹಾಗೂ ಹೊಡೆದಾಟವೂ ನಡೆದಿದ್ದ ಹಿನ್ನೆಲೆಯಲ್ಲಿ, ನಗರದಲ್ಲಿ ನಡೆದ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಜೀವ್ ಗೌಡ ಮತ್ತು ಪುಟ್ಟು ಆಂಜಿನಪ್ಪ ಅವರ ಬೆಂಬಲಿಗರ ನಡುವೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದರು, ಕಾಂಗ್ರೆಸ್‌ ಕಾರ್ಯಕರ್ತರಷ್ಟೇ ಸಂಖ್ಯೆಯಲ್ಲಿ ಪೊಲೀಸರು ಕಾರ್ಯಕ್ರಮದ ಸ್ಥಳದಲ್ಲಿ ಕಂಡುಬಂದರು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭವನದ ಸುತ್ತಮುತ್ತಲೂ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿತ್ತು ,ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಸಿಪಿಐ ಆನಂದ್ ಕುಮಾರ್ ಅವರು ಮಾಡಿದ್ದರು.

ಈ ಸಂದರ್ಭದಲ್ಲಿ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಜಿ.ಎಸ್. ಕಾರ್ತಿಕ್ ,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾರಾಜೀವ್ ಗೌಡ ,ಕೋಚಿಮುಲ್ ಮಾಜಿ ಅಧ್ಯಕ್ಷ ಕೆ. ಗುಡಿಯಪ್ಪ,ಮಾಜಿ ಸದಸ್ಯ ಆರ್.ಶ್ರೀನಿವಾಸ್‌ ,
ಹಾಪ್ ಕಾಮ್ಸ್ ಅಧ್ಯಕ್ಷ ಚಂದ್ರೇಗೌಡ, ಎಸ್.ಎಪ್.ಸಿ.ಎಸ್.ಸದಸ್ಯರಾದ ಮುರಳಿ ,ಗಂಜಿಗುಂಟೆ ಮೌಲಾ,ನಗರಸಭೆ ಮಾಜಿ ಅಧ್ಯಕ್ಷ ಅಪ್ಸರ್ ಪಾಷಾ ,
ಮುಂತಾದವರು ಹಾಜರಿದ್ದರು.

WhatsApp

Join Now

Telegram

Join Now

Instagram

Join Now