--Ads--

ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

On: August 15, 2026 9:40 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಮುಗಬಾಳ ಸಹಾಯಕ ಅಭಿಯಂತರ ವಿದ್ಯುತ್ ಘಟಕದ ಕಚೇರಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಚೇರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಂಕರ್ ಕುಮಾರ್ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಿಂಗೇಗೌಡ ಅವರು ಧ್ವಜಾರೋಹಣ ನೆರವೇರಿಸಿ, ಸಿಬ್ಬಂದಿ ವರ್ಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಹಂಚಿಕೊಂಡರು.

ಬಳಿಕ ನಿಂಗೇಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಮಾಡಿದ ತ್ಯಾಗ, ಬಲಿದಾನ ಹಾಗೂ ಹೋರಾಟವನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.ವಿದ್ಯುತ್ ಇಲಾಖೆಯ ಸೇವೆಗಳು ಸಾರ್ವಜನಿಕರ ದೈನಂದಿನ ಬದುಕಿಗೆ ಅತ್ಯಂತ ಮಹತ್ವದ್ದಾಗಿದ್ದು, ಇಲಾಖೆಯ ಪ್ರತಿಯೊಬ್ಬ ಸಿಬ್ಬಂದಿಯ ಜವಾಬ್ದಾರಿ ಕೂಡ ಮಹತ್ವದ್ದಾಗಿದೆ.

ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ನಿಂಗೇಗೌಡ ಅವರು ಸಲಹೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು, ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಹಾಗೂ ಇಲಾಖೆಯ ಸೇವೆಗಳನ್ನು ಸಮರ್ಪಕವಾಗಿ ತಲುಪಿಸುವುದು ಸಿಬ್ಬಂದಿಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಂಕರ್ ಕುಮಾರ್ ಸ್ವತಂತ್ರ ದಿನಾಚರಣೆಯ ಶುಭಾಶಯಗಳು ತಿಳಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಮುಗಬಾಳ ವಿದ್ಯುತ್ ಅಭಿಯಂತರ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನದೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.

WhatsApp

Join Now

Telegram

Join Now

Instagram

Join Now