ವಿಜಯ ದರ್ಪಣ ನ್ಯೂಸ್….
ತಾವರೆಕೆರೆ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಚಾಲನೆ

ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಕಾಂಕ್ರೀಟ್ ಕಾಮಗಾರಿಗೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿಎಸ್ ರಾಜಶೇಖರ್ ಅವರಿಂದ ಚಾಲನೆ ನೀಡಲಾಯಿತು.
ಸುಮಾರು 600 ವರ್ಷಗಳ ಇತಿಹಾಸ ಹೊಂದಿರುವ, ಚೋಳರ ಕಾಲದ ಪುರಾತನ ದೇವಾಲಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶ್ರೀ ಚೆನ್ನಕೇಶವ ಸ್ವಾಮಿ ದೇವಾಲಯವು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಭಕ್ತರ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ.
ದೇವಾಲಯವು ಸಂಪೂರ್ಣವಾಗಿ ಜೀರ್ಣೋದ್ಧಾರವಾಗಿದ್ದು ಕೆಲವೇ ದಿನಗಳಲ್ಲಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮಹೋತ್ಸವ ಇದ್ದು. ದೇವಾಲಯದ ಆವರಣದಲ್ಲಿ ಭಕ್ತರಿಗೆ ಅನುಕೂಲವಾಗುವಂತೆ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಶಾಸಕರ ವೈಯಕ್ತಿಕ ಅನುದಾನದಲ್ಲಿ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಕಾಮಗಾರಿಗೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಎಸ್. ರಾಜಶೇಖರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುರಾತನ ದೇವಾಲಯಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಭಕ್ತರು ಮತ್ತು ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಶ್ಲಾಘನೀಯವಾಗಿವೆ.
ಶಾಸಕರಿಗೆ ತಿಳಿಸಿದ ಕೆಲವೇ ದಿನಗಳಲ್ಲಿ ತಮ್ಮ ವೈಯಕ್ತಿಕ ಅನುದಾನದಲ್ಲಿ ದೇವಾಲಯದ ಕಾಮಗಾರಿಗೆ ಅನುವು ಮಾಡಿಕೊಟ್ಟಿದ್ದಾರೆ. ಇಂತಹ ಕಾಮಗಾರಿಗಳು ಗ್ರಾಮದಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಹೇಳಿದರು.
ದೇವಾಲಯದ ಆವರಣದಲ್ಲಿ ಕಾಂಕ್ರೀಟ್ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಮಳೆಗಾಲ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ದೇವಾಲಯಕ್ಕೆ ಆಗಮಿಸುವ ಭಕ್ತರ ಸುರಕ್ಷತೆ ಹಾಗೂ ಸಂಚಾರಕ್ಕೂ ಸಹಕಾರಿಯಾಗಲಿದೆ ಎಂದು ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ದೇವಾಲಯದ ಪ್ರಧಾನ ಅರ್ಚಕರಾದ ಬಸವ ಆರಾಧ್ಯ , ದೇವಾಲಯದ ಕಮಿಟಿ ಅಧ್ಯಕ್ಷ ನಾಗರಾಜ್, ಮಾಜಿ ಗ್ರಾಮ್ ಪಂಚಾಯಿತಿ ಅಧ್ಯಕ್ಷ ಬಸವ ಪ್ರಕಾಶ್ ಹಾಗೂ ರವಿಕುಮಾರ್, ಪವಿತ್ರ ಮಂಜುನಾಥ್, ಕಮಿಟಿಯ ಉಪಾಧ್ಯಕ್ಷ ಎಸ್ ನಾಗರಾಜ್, ಸದಸ್ಯರಾದ ಮಂಜುನಾಥ್, ಮೇಲೂರಪ್ಪ, ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಸುಧಾಕರ್, ಜಿಯಾವುಲ್ಲ, ಲೋಕೇಶ್ ಹಾಗೂ ಗುತ್ತಿಗೆದಾರ ಆಕಾಶ್ ಹಾಗೂ ಸ್ಥಳೀಯರು ಊರಿನ ಮುಖಂಡರು ಹಾಜರಿದ್ದರು.










