--Ads--

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

On: August 13, 2026 4:47 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಪುಟ್ ಪಾತ್ ಒತ್ತವರಿ ತೆರವುಗೊಳಿಸಲು ಅಂಗಡಿ ಮಾಲಿಕರಿಗೆ ನಗರಠಾಣೆ ಪಿಎಸ್ಐ ಸೂಚನೆ

ಶಿಡ್ಲಘಟ್ಟ : ಈ ಹಿಂದೆ ಪುಟ್ ಪಾತ್ ಅಂಗಡಿ ಮಾಲೀಕರಿಗೆ ಎರಡು ದಿನಗಳ ಗಡುವು ನೀಡಲಾಗಿತ್ತು ಅದರಂತೆ ಕೆಲ ವ್ಯಾಪಾರಸ್ಥರು ಅಂಗಡಿಗಳ ಮುಂಭಾಗದಲ್ಲಿ ಇಟ್ಟಿದ್ದ ಸಾಮಗ್ರಿಗಳನ್ನು ತೆರವುಗೊಳಿಸಿ ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಆದರೆ ಕೆಲ ಅಂಗಡಿಗಳ ಮುಂಭಾಗದಲ್ಲಿ ಫುಟ್ ಪಾತ್ ಮೇಲೆ ಸಾಮಗ್ರಿಗಳನ್ನು ಇಟ್ಟು ವ್ಯಾಪಾರ ನಡೆಸುತ್ತಿರುವುದು ಮುಂದುವರಿದಿದೆ.
ನಗರದ ಟಿ.ಬಿ.ರಸ್ತೆಯ ಫುಟ್ ಪಾತ್
ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಕೆಲ ವ್ಯಾಪಾರಸ್ಥರಿಗೆ ನಗರ ಠಾಣೆ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಸುನಿಲ್‌ ಕುಮಾ‌ರ್ ಸಂಜೆ ಒತ್ತುವರಿ ಸಂಪೂರ್ಣ ತೆರವುಗೊಳಿಸುವಂತೆ ಸೂಚಿಸಿ, ಮರುಕಳಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರ ಠಾಣೆಯ ಪಿಎಸ್‌ಐ ಸುನಿಲ್‌ ಕುಮಾ‌ರ್ ನೇತೃತ್ವದಲ್ಲಿ ಪೊಲೀಸರು ಟಿ.ಬಿ.ರಸ್ತೆಯಲ್ಲಿ ಪರಿಶೀಲನೆ ನಡೆಸಿದರು ಫುಟ್ ಪಾತ್ ಮೇಲಿನ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಾಪಾರಸ್ಥರಿಗೆ ಸೂಚಿಸಿದರು ಮತ್ತೆ ಒತ್ತುವರಿ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಫುಟ್ ಪಾತ್ ಒತ್ತುವರಿಯಿಂದ ಪಾದಚಾರಿಗಳು ರಸ್ತೆಯಲ್ಲಿಯೇ ಸಂಚರಿಸುವಂತಾಗಿದ್ದು, ಇದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಫುಟ್ ಪಾತ್ ಗಳನ್ನು ಮುಕ್ತಗೊಳಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಒತ್ತುವರಿ ತೆರವುಗೊಳಿಸಿ ಸಹಕರಿಸಬೇಕು ಎಂದು ಮನವಿ ಮಾಡಿದ್ದು, ಅಗತ್ಯವಿರುವ ಕಡೆ ನಗರಸಭೆಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

WhatsApp

Join Now

Telegram

Join Now

Instagram

Join Now