--Ads--

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

On: August 14, 2026 2:34 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು : ಉಪನ್ಯಾಸಕಿ ವಾಣಿ

ಶಿಡ್ಲಘಟ್ಟ : ಮಕ್ಕಳಲ್ಲಿ ಪ್ರಶ್ನಿಸುವ, ಚಿಂತಿಸುವ ಮತ್ತು ಸ್ವತಂತ್ರವಾಗಿ ಕಲಿಯುವ ಮನೋಭಾವ ಬೆಳೆಸಬೇಕು,
ಸರಳ ಬೋಧನಾ ಸಾಮಗ್ರಿಗಳ ಬಳಕೆ, ಗುಂಪು ಚಟುವಟಿಕೆಗಳು, ಪ್ರಶೋತ್ತರ, ಚರ್ಚೆ ಹಾಗೂ ವಿದ್ಯಾರ್ಥಿ ಕೇಂದ್ರಿತ ಕಲಿಕಾ ವಿಧಾನಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಿಕ್ಷಕರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಶಿಕ್ಷಣ ಮತ್ತು ತರಭೇತಿ ಸಂಸ್ಥೆಯ ಹಿರಿಯ ಉಪನ್ಯಾಸಕಿ ವಾಣಿ ಸಲಹೆ ನೀಡಿದರು.

ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ಪರಿಶೀಲಿಸಿ, ಬೋಧನಾ ವಿಧಾನಗಳ ಕುರಿತು ಶಿಕ್ಷಕರಿಗೆ ಮಾರ್ಗದರ್ಶನ ನೀಡುವಂತೆ ಅವರು
ವಿವರಿಸಿದರು.

ವಿದ್ಯಾರ್ಥಿಗಳ ಕಲಿಕೆಯಲ್ಲಿ ಗುಣಮಟ್ಟ ಹೆಚ್ಚಿಸಲು ಶಿಕ್ಷಕರು ಪಾಠ ಬೋಧನೆಯ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯ ಕಲಿಕಾ ಮಟ್ಟವನ್ನು ಗಮನಿಸಬೇಕು ಎಂದು ಹೇಳಿದರು.

ಇದೇ ವೇಳೆ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ತರಗತಿ ಚಟುವಟಿಕೆಗಳಲ್ಲಿ ಅವರ ಭಾಗವಹಿಸುವಿಕೆ ಹಾಗೂ ಕಲಿಕೆಯಲ್ಲಿನ ಆಸಕ್ತಿಯನ್ನು ಅವರು ಗಮನಿಸಿ ,ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪಠ್ಯ ವಿಷಯಗಳ ಕುರಿತು ಪ್ರಶ್ನೆಗಳನ್ನು ಕೇಳುವ ಮೂಲಕ ಅವರ ಅರಿವು ಮತ್ತು ಚಿಂತನಾ ಸಾಮರ್ಥ್ಯವನ್ನು ಪರಿಶೀಲಿಸಿದರು.

ಈ ವೇಳೆ ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಎಂ. ಉಮಾದೇವಿ, ಎಸ್‌.ಡಿ.ಎಂ.ಸಿ ಅಧ್ಯಕ್ಷ ಅಶ್ವಥ್‌ ನಾರಾಯಣ್‌, ಶಿಕ್ಷಕರಾದ ಆನಂದ್ ಕುಮಾರ್, ಮಂಜುನಾಥ್‌, ನಾಗರತ್ನ, ಶಾಲೆಯ ಸಿಬ್ಬಂದಿ ಹಾಗು ವಿದ್ಯಾರ್ಥಿಗಳು ಹಾಜರಿದ್ದರು.

WhatsApp

Join Now

Telegram

Join Now

Instagram

Join Now