ವಿಜಯ ದರ್ಪಣ ನ್ಯೂಸ್….
ಜಿಲ್ಲಾಡಳಿತ ಭವನದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಆಗಸ್ಟ್ 15:
“80 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ ಎನ್ ಅನುರಾಧ ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ರಾಷ್ಟ್ರ ಧ್ವಜ ಹಾರಿಸುವ ಮೂಲಕ ಡಿಸಿ ಚಾಲನೆ ನೀಡಿದರು
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವಾಸಂತಿ ಅಮರ್, ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











