--Ads--

80ನೇ ಸ್ವಾತಂತ್ರ್ಯ ದಿನಾಚರಣೆ, ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ, ಹರ್ ಘರ್ ತಿರಂಗಾ ಪಥ ಸಂಚಲನ: 

On: August 15, 2026 3:04 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

80ನೇ ಸ್ವಾತಂತ್ರ್ಯ ದಿನಾಚರಣೆ, ಸಂಗೊಳ್ಳಿ ರಾಯಣ್ಣ ಜನ್ಮದಿನಾಚರಣೆ, ಹರ್ ಘರ್ ತಿರಂಗಾ ಪಥ ಸಂಚಲನ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಾರ್ಟಿ ಮಂಡಲ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ವೀರ ಸಂಗೊಳ್ಳಿ ರಾಯಣ್ಣರವರ ಜನ್ಮದಿನಾಚರಣೆ ಹಾಗೂ ಹರ್ ಘರ್ ತಿರಂಗಾ ಅಭಿಯಾನ ಪಥ ಸಂಚಲನ ಕಾರ್ಯಕ್ರಮ ನಡೆಯಿತು.

ದಕ್ಷಿಣ ಜಿಲ್ಲಾ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ಧ್ವಜರೋಹಣ ಮಾಡಿ, ಭಾರತಮಾತೆ, ಸಂಗೊಳ್ಳಿ ರಾಯಣ್ಣರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪಥಸಂಚಲಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಕೆ.ಉಮೇಶ್ ಶೆಟ್ಟಿರವರು ಮಾತನಾಡಿ ಸ್ವಾತಂತ್ರ್ಯ ಲಭಿಸಿ 80ವರ್ಷಗಳು ಸಂದಿದೆ . ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ವಂದೇ ಮಾತರಂ ಸಂಪೂರ್ಣವಾಗಿ ಹಾಡಲು ಅವಕಾಶವಿದೆ ಇದಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಿದೆ.

ಲಕ್ಷಾಂತರ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ಮಾಡಿದ ಮಹನೀಯರುಗಳನ್ನು ಸ್ಮರಣೆ ಮಾಡಬೇಕು. ಸಂಗೊಳ್ಳಿರಾಯಣ್ಣ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ವೀರಮರಣ ಹೊಂದಿದ, ಸಂಗೊಳ್ಳಿ ರಾಯಣ್ಣ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು.

ದೇಶದಲ್ಲಿ ಶಾಂತಿ, ನೆಮ್ಮದ್ದಿಯಾಗಿ ಜೀವನ ನಡೆಸುತ್ತಿದ್ದೇವೆ ಎಂದರೆ ಸೈನಿಕರು ಕಾರಣ ಮತ್ತು ಜೀವ ಉಳಿಸಲು ಬೇಕಾದ ಆಹಾರ ಪದಾರ್ಥಗಳು ಬೆಳೆಯುವ ರೈತ ಇಬ್ಬರು ಎರಡು ಕಣ್ಣು ಇದ್ದಂತೆ.

ಪ್ರತಿಯೊಬ್ಬರ ಕೈಯಲ್ಲಿ, ಮನೆ, ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಡಬೇಕು ಎಂದು ಹರ್-ಘರ್ ತಿರಂಗಾ ಯಾತ್ರೆ ಪ್ರಧಾನಿ ನರೇಂದ್ರಮೋದಿ ರವರ ನೇತೃತವದಲ್ಲಿ ಯಶ್ವಸಿಯಾಗಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿರವರ ನೇತೃತ್ವದಲ್ಲಿ ವಿಕಸಿತ ಭಾರತ 2046ಕ್ಕೆ ವಿಶ್ವದ ನಂಬರ್ ಓನ್ ಸ್ಥಾನದಲ್ಲಿ ಇರಲಿದೆ ಎಂದು ಹೇಳಿದರು.

ಮಂಡಲ ಬಿಜೆಪಿ ಅಧ್ಯಕ್ಷ ಎನ್.ಬಿ.ಮಂಜುನಾಥ್,
ಮಾಜಿ ಪಾಲಿಕೆ ಸದಸ್ಯರುಗಳಾದ ರಾಮಪ್ಪ, ರಾಜೇಶ್ವರಿ ಬೆಳಗೊಡ್ ಬಿಜೆಪಿ ಕ್ರಾಂತಿರಾಜು, ದೊಡ್ಡವೀರಯ್ಯ, ನಾಗರಭಾವಿ ಎಸ್.ರಾಜು ಪ್ರಸಿದ್ದ್ , ಕಾರ್ಯಕರ್ತರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now