ವಿಜಯ ದರ್ಪಣ ನ್ಯೂಸ್…..
ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ತಾಂಡವಪುರ ಆಗಸ್ಟ್ 15 : ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ನ 2ನೇ ವರ್ಷದ ವಾರ್ಷಿಕೋತ್ಸವ, ವಿವಿಧ ಸಾಧಕರಿಗೆ ಪ್ರಶಸ್ತಿ ಪ್ರದಾನ, ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ ಯತೀಂದ್ರ ಸಿದ್ದರಾಮಯ್ಯ ಬಾಗಿ ಆಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗಣ್ಯ ವ್ಯಕ್ತಿಗಳನ್ನು ಸನ್ಮಾನ್ಯ ಗೌರವಿಸಿ ಅಭಿನಂದನೆ ಸಲ್ಲಿಸಿದರು
ಮೈಸೂರಿನ ಕುವೆಂಪು ನಗರದಲ್ಲಿ ನಡೆದ ಈ ಸಮಾರಂಭದಲ್ಲಿ ಪರಮಪೂಜ್ಯ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯನವರು ಕುವೆಂಪುಅವರ ವಿಶ್ವಮಾನವ ಸಂದೇಶ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣ. ಎಂದುತಿಳಿಸಿದ ಅವರು
ಇದೇ ಸಂದರ್ಭದಲ್ಲಿ, ಮಹಾಕವಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಕರ್ನಾಟಕ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಕ್ಕಾಗಿ ತಿಳಿಸಿದ ಅವರು ಮಾಜಿ ಮುಖ್ಯಮಂತ್ರಿ ತಂದೆಯವರಾದ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಪರಮಪೂಜ್ಯ ಸುತ್ತೂರು ಮಠದೀಶರಾದ ಶ್ರೀ ಶ್ರೀ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೂಜ್ಯ ಶ್ರೀ ಶಿವಾನಂದಪುರಿ ಸ್ವಾಮೀಜಿ, ಪೂಜ್ಯ ಶ್ರೀ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಡಾ. ಸೋಮನಾಥ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ, ಶಾಸಕರಾದ ಜಿ.ಟಿ. ದೇವೇಗೌಡ, ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್ ಹಾಗೂ ಡಾ. ತಿಮ್ಮಯ್ಯ, ಟ್ರಸ್ಟ್ನ ಅಧ್ಯಕ್ಷ ಹೆಚ್.ಕೆ. ರಾಮು ಸೇರಿದಂತೆ ಹಲವು ಗಣ್ಯರು ಹಾಗೂ ಹಲವಾರು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ಕುವೆಂಪು ಅವರ ವಿಶ್ವಮಾನವ ಸಂದೇಶವು ಪ್ರತಿಯೊಬ್ಬರ ಬದುಕಿನ ಮೌಲ್ಯವಾಗಲಿ; ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಬೆಳಕು ಸಮಾಜದಲ್ಲಿ ಸದಾ ಬೆಳಗಲಿ.









