--Ads--

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ

On: August 16, 2026 2:42 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಬಂಚಳ್ಳಿ ಹುಂಡಿ ಸರ್ಕಾರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಣೆ 

ತಾಂಡವಪುರ ಆಗಸ್ಟ್ 16: ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ವರ್ಣ ವಿಧಾನಸಭಾ ಕ್ಷೇತ್ರದ ಬಂಚಳ್ಳಿ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಿದರು

ಈ ಕಾರ್ಯಕ್ರಮಕ್ಕೆ ಶಾಲೆಗೆ ಭೂಮಿ ನೀಡಿದ ಭೂತಾನಿಗಳು ಹಾಗೂ ಕಾಂಗ್ರೆಸ್ ಮುಖಂಡ ಮನ್ನೇಗೌಡ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಪ್ರಭು ಸಿದ್ದಮ್ಮ ಮುಖಂಡರಾದ ಹುಚ್ಚೇಗೌಡ ಬಸವಣ್ಣ ಮಹದೇವು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಶಾಹ ಶಿಕ್ಷಕರು ಹಾಗೂ ಶಾಲೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಮಾಡಿದ ಮಹಾತ್ಮರನ್ನು ಸ್ಮರಿಸಿಕೊಂಡು ಧ್ವಜ ವಂದನ ಹೊಂದಿಸಿ ಗೌರವ ಸಲ್ಲಿಸಿದರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಯಿತು

&&&&&&&&&&&&&&&&&&

ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ತಾಂಡವಪುರ ಆಗಸ್ಟ್ 16: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ತಾಂಡವಪುರಗ್ರಾಮ ಪಂಚಾಯಿತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಿದರು

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ರವರು ಧ್ವಜಾರೋಹಣ ನಿರ್ವಹಿಸಿ ಮಹಾತ್ಮ ಗಾಂಧೀಜಿ ಡಾ. ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ ಕೆ ಮರಯ್ಯ ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಟಿಪಿ ಮಹೇಶ್ ಹಾಗೂ ಪಂಚಾಯಿತಿ ಸಿಬ್ಬಂದಿ ವರ್ಗದವರು ಪೌರಕಾರ್ಮಿಕರು ಮಹಾತ್ಮರಿಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಗೌರವಿಸಿದರು

WhatsApp

Join Now

Telegram

Join Now

Instagram

Join Now