--Ads--

ನಂಜನಗೂಡು ವಿಧಾನಸಭಾ ಕ್ಷೇತ್ರದ  ಹುರ ಗ್ರಾಮದಲ್ಲಿ ಪೋಲಿಸ್ ಔಟ್ ಪೋಸ್ಟ್ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ

On: August 18, 2026 5:29 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ನಂಜನಗೂಡು ವಿಧಾನಸಭಾ ಕ್ಷೇತ್ರದ  ಹುರ ಗ್ರಾಮದಲ್ಲಿ ಪೋಲಿಸ್ ಔಟ್ ಪೋಸ್ಟ್ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ

ತಾಂಡವಪುರ ಆಗಸ್ಟ್ 18 ಮೈಸೂರು ಜಿಲ್ಲೆ, ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹುರ ಗ್ರಾಮದಲ್ಲಿ ಈ ಹಿಂದೆ 2017ರಲ್ಲಿ ಸರ್ಕಾರದಿಂದ ಪೊಲೀಸ್ ಔಟ್‌ಪೋಸ್ಟ್‌ ಮಂಜೂರು ಮಾಡಲಾಗಿತ್ತು. ಆದರೆ ಪ್ರಸ್ತುತ ಔಟ್‌ಪೋಸ್ಟ್‌ ಕಾರ್ಯನಿರ್ವಹಿಸುತ್ತಿಲ್ಲ. ಆದ್ದರಿಂದ ಅದನ್ನು ಪುನಃ ಮಂಜೂರು ಮಾಡಿಕೊಡುವಂತೆ ಶಾಸಕ ದರ್ಶನ ಧ್ರುವನಾರಾಯಣ ರವರು ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದು ಮನವಿ ಮನವಿ ಮಾಡಿದರು

ಅದೇ ರೀತಿ, ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮವು ನಂಜನಗೂಡು ಹಾಗೂ ಸರಗೂರು ತಾಲ್ಲೂಕುಗಳ ಗಡಿಭಾಗದಲ್ಲಿದ್ದು, ಕಾಡಂಚಿನ ಪ್ರದೇಶವಾಗಿದೆ. ಈ ಭಾಗದಲ್ಲಿ ಆಗಾಗ್ಗೆ ಮಾನವ–ವನ್ಯಜೀವಿ ಸಂಘರ್ಷಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಹೆಡಿಯಾಲ ಗ್ರಾಮಕ್ಕೆ ಪೊಲೀಸ್ ಠಾಣೆ ಅತ್ಯಗತ್ಯವಾಗಿದೆ ಎಂದು ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದರು.
ಹೆಡಿಯಾಲದಿಂದ ಹುಲ್ಲಹಳ್ಳಿ ಸುಮಾರು 30 ಕಿ.ಮೀ. ಹಾಗೂ ಸರಗೂರು ಸುಮಾರು 20 ಕಿ.ಮೀ. ದೂರದಲ್ಲಿರುವುದರಿಂದ, ಗ್ರಾಮಸ್ಥರಿಗೆ ತುರ್ತು ಸಂದರ್ಭಗಳಲ್ಲಿ ಪೊಲೀಸ್ ಸೇವೆ ಪಡೆಯಲು ತೊಂದರೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹೆಡಿಯಾಲ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆಯನ್ನು ಆದಷ್ಟು ಶೀಘ್ರವಾಗಿ ಮಂಜೂರು ಮಾಡಿಕೊಡುವಂತೆ ಮಾನ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆ ಅವರಲ್ಲಿ ಮನವಿ ಮಾಡಿದ ಶಾಸಕರು ಆದಷ್ಟು ಬೇಗನೆ ಈ ಎಲ್ಲಾ ಕೋರಿಕೆಗಳಿಗೆ ಸ್ಪಂದಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಅಪೋಲೋ ಹಾಸ್ಪಿಟಲ್ಸ್‌ ನಿಂದ ‘ಆಲ್ವೇಸ್ ಓಪನ್. ಆಲ್ವೇಸ್ ಹಿಯರ್’ ಭಾರತದಿಂದ ಜಾಗತಿಕ ಆರೋಗ್ಯಸೇವೆಯಲ್ಲಿ ಪ್ರಥಮ ಉಪಕ್ರಮ ಅಪೋಲೋ ಹಾಸ್ಪಿಟಲ್ಸ್‌ ಗಳಾದ್ಯಂತ ಭಾನುವಾರದಂದೂ ವೈದ್ಯಕೀಯ ಸಮಾಲೋಚನೆಗಳು, ರೋಗನಿರ್ಣಯ ಪರೀಕ್ಷೆಗಳು, ರೋಗತಡೆಯ ಆರೋಗ್ಯ ತಪಾಸಣೆಗಳು ಮತ್ತು ನಿಗದಿತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವ ತನ್ನ ಮೊದಲ ಉಪಕ್ರಮ ಪ್ರಾರಂಭಿಸಿದೆ

ಸದ್ಗುರು ಸನ್ನಿಧಿ ಬೆಂಗಳೂರಿನಲ್ಲಿ ವಿಜೃಂಭಣೆಯ ನಾಗರ ಪಂಚಮಿಯ ಆಚರಣೆ

ವಿಪ್ರೋ ಕನ್ಸ್ಯೂಮರ್ ಕೇರ್ ಡರ್ಮಟಚ್ ಅನ್ನು ಸ್ವಾಧೀನಪಡಿಸಿಕೊಳ್ಳುವ ಮೂಲಕ ಡಿಜಿಟಲ್ ಬ್ರಾಂಡ್ ಪ್ರವೇಶವನ್ನು ಆರಂಭಿಸಿದೆ

ಶ್ರೀ ಅಮ್ಮನಾಗಮ್ಮ ದೇವಾಲಯದಲ್ಲಿ ನಾಗರಪಂಚಮಿ ಹಬ್ಬ, ಭಕ್ತಾಧಿಗಳಿಂದ ಹಾಲಿನ ಅಭಿಷೇಕ

ಸ್ಯಾಮ್‌ಸಂಗ್ ಭಾರತದ ಟಾಪ್ 40 ಯುವ ಆವಿಷ್ಕಾರಕರನ್ನು ಘೋಷಿಸಿದೆ

ಪ್ರತಿಭೆಗೆ ಮಾನದಂಡ ಜಾತಿಯಾಗಬಾರದು : ‌ಪ್ರಾಧ್ಯಾಪಕ ಡಾ ಸಿಸಿರಾ