ವಿಜಯ ದರ್ಪಣ ನ್ಯೂಸ್….
ಶ್ರೀ ಮಹರ್ಷಿ ವಾಲ್ಮೀಕಿ ಚಾರಿಟೇಬಲ್ ಟ್ರಸ್ಟ್ ಸಮುದಾಯದ ಯುವಜನರ ಸಬಲೀಕರಣಕ್ಕೆ ಹೆಚ್ಚು ಶ್ರಮವಹಿಸಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ

ತಾಂಡವಪುರ ಆಗಸ್ಟ್ 18 ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಚಾರಿಟೇಬಲ್ ಟ್ರಸ್ಟಿನ ನೂತನ ಕಚೇರಿಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ರಾಮಯ್ಯನವರು ಉದ್ಘಾಟನೆ ನೆರವೇರಿಸಿದರು
ಬಳಿಕ ಟ್ರಸ್ಟಿನ ಮುಖಂಡರು ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು. ಸನ್ಮಾನ ಗೌರವ ಸ್ವೀಕರಿಸಿ ಮಾತನಾಡಿದ ಸಚಿವ ಡಾ ಯತಿಂದ್ರ ಸಿದ್ರಾಮಯ್ಯನವರು ಇದು ಕಚೇರಿ ಅಥವಾ ಸಂಘಟನೆಯಾಗಿ ಉಳಿಯದೆ, ಶಿಕ್ಷಣ, ಸಾಮಾಜಿಕ ನ್ಯಾಯ, ಯುವಜನರ ಸಬಲೀಕರಣ ಹಾಗೂ ಸಮುದಾಯದ ಅಭಿವೃದ್ಧಿಗೆ ಪರಿಣಾಮಕಾರಿ ವೇದಿಕೆಯಾಗಬೇಕು ಹಾಗೂ ಟ್ರಸ್ಟಿನ ಮುಖಂಡರುಗಳು ಸಮಾಜದ ಜನತೆಗೆ ಶಿಕ್ಷಣದ ಅರಿವು ಮೂಡಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ತಿಳಿಸಿದರು.
ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡುವ ಜೊತೆಗೆ, ಸಮುದಾಯದ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಟ್ರಸ್ಟ್‌ನ ಸೇವೆ ಹಾಗೂ ಸೌಲಭ್ಯಗಳು ತಲುಪುವಂತಾಗಬೇಕು ಎಂದು ಸಲಹೆ ನೀಡಿ, ಟ್ರಸ್ಟ್‌ನ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು
ಈ ಸಂದರ್ಭದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಎಚ್.ಡಿ. ಕೋಟೆ ಶಾಸಕ ಅನಿಲ್ ಚಿಕ್ಕಮಾದು, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಶಾಸಕ ಜಿ ಟಿ ದೇವೇಗೌಡ ಹಾಗೂ ಕೆ.ಆರ್. ಕ್ಷೇತ್ರದ ಶಾಸಕ ಟಿ. ಶ್ರೀವತ್ಸ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ಸಮಾಜದ ಮುಖಂಡ ಟಿ ದೇವರಾಜು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು ಸಮಾಜದ ಮುಖಂಡರು ಟ್ರಸ್ಟಿನ ಸದಸ್ಯರುಗಳು ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು











