--Ads--

ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಶಾಸಕ ಶರತ್ ಬಚ್ಚೇಗೌಡ

On: August 22, 2026 11:28 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ವಿದ್ಯಾರ್ಥಿಗಳು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು: ಶಾಸಕ ಶರತ್ ಬಚ್ಚೇಗೌಡ

ಟೀಮ್ ಆರ್ ಕೆ ಫೌಂಡೇಶನ್ ಹಾಗೂ ಸಿಲಿಕಾನ್ ಸಿಟಿ ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

ತಾವರೆಕೆರೆ : ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಟೀಮ್ ಆರ್.ಕೆ ಫೌಂಡೇಶನ್ ಹಾಗೂ ಸಿಲಿಕಾನ್ ಸಿಟಿ ಆಸ್ಪತ್ರೆಯ ಸಹಯೋಗದಲ್ಲಿ ಸುಮಾರು 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ ಅವರು ಉದ್ಘಾಟಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಮಾದಕ ವಸ್ತುಗಳಿಂದ ಸಂಪೂರ್ಣವಾಗಿ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ರಾಜ್ಯ ಸರ್ಕಾರದ ವತಿಯಿಂದ ನಡೆಯುತ್ತಿರುವ **‘ಬೇಡ ಬ್ರೋ, ಬೇಡ ಬ್ರೋ, ಡ್ರಗ್ಸ್ ಬೇಡ ಬ್ರೋ’** ಎಂಬ ಮಾದಕ ವಸ್ತುಗಳ ವಿರೋಧಿ ಜಾಗೃತಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ತಾಲೂಕಿನ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಈ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿಯೂ ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಿಲಿಕಾನ್ ಸಿಟಿ ಆಸ್ಪತ್ರೆಯ ವೈದ್ಯರಾದ ಡಾ. ಸುಪ್ರೀತ್ ಸಿ.ಎಸ್. ಮಾತನಾಡಿ, ಜೀವನದಲ್ಲಿ ಯಾವುದೇ ವಸ್ತುವನ್ನು ಕಳೆದುಕೊಂಡರೂ ಅದನ್ನು ಮತ್ತೆ ಪಡೆದುಕೊಳ್ಳಬಹುದು. ಆದರೆ ಆರೋಗ್ಯವನ್ನು ಕಳೆದುಕೊಂಡರೆ ಎಷ್ಟೇ ಪ್ರಯತ್ನಿಸಿದರೂ ಹಿಂದಿನ ಆರೋಗ್ಯವನ್ನು ಸಂಪೂರ್ಣವಾಗಿ ಮರಳಿ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿಗಳು ತಂಬಾಕು, ಡ್ರಗ್ಸ್ ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕವಾದ ಯಾವುದೇ ವಸ್ತುಗಳ ಬಳಕೆಯಿಂದ ದೂರವಿರಬೇಕು. ಉತ್ತಮ ಆಹಾರ ಪದ್ಧತಿ, ಆರೋಗ್ಯಕರ ಜೀವನಶೈಲಿ ಹಾಗೂ ನಿಯಮಿತ ಆರೋಗ್ಯ ತಪಾಸಣೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.

ತುರ್ತು ಸಂದರ್ಭಗಳಲ್ಲಿ 108 ಅಂಬುಲೆನ್ಸ್ ಸೇವೆ ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದ್ದು, ಅಂಬುಲೆನ್ಸ್‌ಗಳಲ್ಲಿ ಬೇಸಿಕ್ ಲೈಫ್ ಸಪೋರ್ಟ್ (BLS) ಹಾಗೂ ಅಗತ್ಯವಿರುವಲ್ಲಿ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಿದರೆ ತುರ್ತು ಪರಿಸ್ಥಿತಿಯಲ್ಲಿ ಅನೇಕ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಗಮನ ಹರಿಸಿದರೆ ಉತ್ತಮ ಎಂದು ಡಾ. ಸುಪ್ರೀತ್ ಸಿ.ಎಸ್. ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ, ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಅಗತ್ಯ ಸಲಹೆ-ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಯೋಜಕರು ಹಾಗೂ ಟೀಮ್ ಆರ್ ಕೆ ಫೌಂಡೇಶನ್ ಸಂಸ್ಥಾಪಕ ಕಾರ್ತಿಕ್ ಜೀವ ಮಾತನಾಡಿ ನಮ್ಮ ಸಂಸ್ಥೆ ವತಿಯಿಂದ ತಾಲೂಕಿನಲ್ಲಿ ಹಲವು ರೀತಿಯ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದೇವೆ ಅದೇ ರೀತಿ ಇಂದು ಶಾಸಕರ ಅಧ್ಯಕ್ಷತೆಯಲ್ಲಿ ಬಹಳ ಅರ್ಥಪೂರ್ಣವಾದ ಶಿಬಿರವನ್ನು ಆಯೋಜನೆ ಮಾಡಿ ಯಶಸ್ವಿಗೊಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಅದ್ಭುತವಾದ ಕಾರ್ಯಕ್ರಮಗಳನ್ನು ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ,BMRD ಅಧ್ಯಕ್ಷ ಕೇಶವ ಮೂರ್ತಿ, ವಿಜಯಕುಮಾರ್, ಸಿ. ಜಯರಾಜ್,ನಗರ ಸಭೆಯ ಸದಸ್ಯ ಗೌತಮ್,BMRD ಸದಸ್ಯ H.M ಸುಬ್ಬರಾಜು, ಟೌನ್ ಬ್ಯಾಂಕ್ ಅಧ್ಯಕ್ಷ ಬಲ್ಪ್ ಮಂಜುನಾಥ್, ಕೆಪಿಸಿಸಿ ಕಾರ್ಮಿಕ ಘಟಕದ ಪ್ರದಾನ ಕಾರ್ಯದರ್ಶಿ ಹರೀಶ್ ಚಕ್ರವರ್ತಿ, ಮುಖಂಡರಾದ H.K ಸಂದೀಪ್, ಕರುಣೆ ಗೋಡೆ ಚೇತನ್, ಪ್ರಾಂಶುಪಾಲರಾದ ರಾಮಲಿಂಗಪ್ಪ ರೆಡ್ಡಿ ಬೇಗೂರು, ಆಯೋಜಕಾರದ ಕಾರ್ತಿಕ್ ಜೀವಾ, ಇಮ್ತಿಯಾಜ್, ಸಮೀರ್ ಹಸಾದ್, ಮುಖಂಡರಾದ RTC ಗೋವಿಂದ್, ಹಾಗೂ ವೈದ್ಯರು , ಉಪನ್ಯಾಸಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now