ವಿಜಯ ದರ್ಪಣ ನ್ಯೂಸ್….
ಕುಂಬಳಹಳ್ಳಿ ಗ್ರಾಮ ಪಂಚಾಯತಿಯಲ್ಲಿ ‘ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್’ ಜಾಬ್ ಕಾರ್ಡ್ ಮೇಳ
ತಾವರೆಕೆರೆ : ಹೊಸಕೋಟೆ ತಾಲೂಕಿನ ಕುಂಬಳಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಿವಕುಮಾರ್ ಬಿ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ರವರ ಅಧ್ಯಕ್ಷತೆಯಲ್ಲಿ ಹಾಗು ಮುನಿಯಪ್ಪ ಪಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಘನ ಉಪಸ್ಥಿತಿಯಲ್ಲಿ
ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಷನ್ (ಗ್ರಾಮೀಣ)’ ಯೋಜನೆಯಡಿ ವಿಶೇಷ ‘ಉದ್ಯೋಗ ಚೀಟಿ (ಜಾಬ್ ಕಾರ್ಡ್) ಮೇಳ’ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.










