--Ads--

ಸಮಾಜಸೇವಕ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬ ಆಚರಣೆ

On: August 25, 2026 6:09 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಸಮಾಜಸೇವಕ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ಹಲಸಹಳ್ಳಿ ಗ್ರಾಮದ ಸಮಾಜಸೇವಕರು ಹಾಗೂ ಉದ್ಯಮಿಗಳಾದ ಮಮತೇಶ್ ಗೌಡ ಅವರ 42ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು, ಸ್ನೇಹಿತರು ಹಾಗೂ ಅಪಾರ ಸಂಖ್ಯೆಯ ಯುವಕರ ಸಮ್ಮುಖದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಯುವ ಸಮೂಹ ಭಾಗವಹಿಸಿ ಮಮತೇಶ್ ಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು, ತಮ್ಮ ನೆಚ್ಚಿನ ಸಮಾಜಸೇವಕರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮುರಳಿ ಮಾತನಾಡಿ,ಮಮತೇಶ್ ಗೌಡ ಅವರ ಸಮಾಜಮುಖಿ ಕಾರ್ಯಗಳಿಂದ ತಾಲೂಕಿನ ಹಲವು ಯುವಕರು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಯುವಕರಿಗೆ ಸದಾ ಪ್ರೋತ್ಸಾಹ ನೀಡುತ್ತಾ, ಅವರ ಭವಿಷ್ಯಕ್ಕೆ ದಾರಿದೀಪವಾಗಿ ನಿಂತಿದ್ದಾರೆ. ಅವರ ಸೇವಾ ಮನೋಭಾವ ಇನ್ನಷ್ಟು ಜನರಿಗೆ ಪ್ರೇರಣೆಯಾಗಲಿ ಎಂದು ತಿಳಿಸಿ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು.

ನಂತರ ಮಾತನಾಡಿದ ಮಮತೇಶ್ ಗೌಡ ಅವರು, ತಮ್ಮ 42ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಪ್ರೀತಿ, ಅಭಿಮಾನ ಹಾಗೂ ಶುಭಾಶಯಗಳನ್ನು ನೀಡಿದ ಯುವ ಸಮೂಹ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. ತ

ಮ್ಮ ಮೇಲಿನ ಪ್ರೀತಿ ಹಾಗೂ ವಿಶ್ವಾಸಕ್ಕೆ ಸದಾ ಋಣಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಸಮಾಜಮುಖಿ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಯುವಕರು, ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಜನರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now