--Ads--

ಋತುಮಾನದ ಜ್ವರ (ಇನ್ಲ್ಫೂಯೆಂಜಾ) ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

On: August 27, 2026 7:39 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಋತುಮಾನದ ಜ್ವರ (ಇನ್ಲ್ಫೂಯೆಂಜಾ) ನಿಯಂತ್ರಣಕ್ಕೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ. 27:-

ಸಾಮಾನ್ಯವಾಗಿ ಪ್ಲೂ ಎಂದು ಕರೆಯಲಾಗುವ ಋತುಮಾನದ ಜ್ವರ (ಇನ್ಲ್ಫೂಯೆಂಜಾ), ಇನ್ಲ್ಫೂಯೆಂಜಾ ವೈರಸ್ ಗಳಿಂದ ಉಂಟಾಗುವ ಸಾಂಕ್ರಾಮಿಕ ಉಸಿರಾಟದ ಕಾಯಿಲೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ಲ್ಫೂಯೆಂಜಾ ಸಾಮಾನ್ಯವಾಗಿ ವರ್ಷಕ್ಕೆ ಎರಡು ಬಾರಿ ಜನವರಿಯಿಂದ ಮಾರ್ಚ್ ಮತ್ತು ಜುಲೈನಿಂದ ಸೆಪ್ಟೆಂಬ‌ರ್ ವರೆಗೆ ಹೆಚ್ಚಾಗುತ್ತದೆ. ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ಇನ್ನುಯೆಂಜಾವನ್ನು ಪತ್ತೆಹಚ್ಚಲು, ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಕೈಗೊಂಡಿದೆ.

ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ಆಗಸ್ಟ್ 24 ರಂದು ರಾಜ್ಯ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆಯನ್ನು ನಡೆಸಿದ್ದು, ಈ ಸಂದರ್ಭದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದರೂ ಅಥವಾ ಯಾವುದೇ ರೀತಿಯ ಪರಿಸ್ಥಿತಿ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯದ ಆರೋಗ್ಯ ವ್ಯವಸ್ಥೆಯು ಸಾಕಷ್ಟು ಮೂಲಸೌಕರ್ಯ ಹಾಗೂ ಅಗತ್ಯ ಔಷಧಿಗಳೊಂದಿಗೆ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

*ಪ್ರಸ್ತುತ ಇನ್ಲ್ಫೂಯೆಂಜಾ ಪರಿಸ್ಥಿತಿ:*
ಇಂಟಿಗ್ರೇಟೆಡ್ ಹೆಲ್ತ್ ಇನ್ನಾರ್ಮೇಷನ್ ಪ್ಲಾಟ್‌ಫಾರ್ಮ್ (IHIP) ನ ಕಣ್ಣಾವಲು ಮಾಹಿತಿ ಪ್ರಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಸ್ಟ್ 16 ರವರೆಗೆ ಒಟ್ಟು 3,463 ಶಂಕಿತ ಪ್ರಕರಣಗಳಿದ್ದು, 26 ಪ್ರಯೋಗಾಲಯ ದೃಢೀಕೃತ ಇನ್ನುಯೆಂಜಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ಆಗಸ್ಟ್ 17 ರಿಂದ ಆಗಸ್ಟ್ 26 ರವರೆಗೆ ಶಂಕಿತ 201 ILI [INFLUENZA LIKE ILLNESS] ಪ್ರಕರಣಗಳು ಮತ್ತು 43 SARI [SEVERE ACUTE RESPIRATORY INFECTION] ಶಂಕಿತ ಪ್ರಕರಣಗಳು ಕಂಡು ಬಂದಿರುತ್ತವೆ. ಇದರಲ್ಲಿ 03 ILI ಪ್ರಕರಣಗಳ ಪರೀಕ್ಷೆಯಾಗಿದ್ದು, 02 ಪ್ರಕರಣಗಳು ದೃಢಪಟ್ಟಿರುತ್ತವೆ.

*ರೋಗ ಪತ್ತೆ ಹಚ್ಚುವಿಕೆ ಮತ್ತು ಕಣ್ಣಾವಲು ವ್ಯವಸ್ಥೆಯ ಬಲವರ್ಧನೆ:*

ಜಿಲ್ಲೆಯಲ್ಲಿ ಇನ್ಲ್ಫೂಯೆಂಜಾ ಕಾಯಿಲೆ (ಐ.ಎಲ್.ಟಿ) ಮತ್ತು ತೀವು ಉಸಿರಾಟದ ಸೋಂಕು (SARI) ಗಳ ಪ್ರಕರಣಗಳನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗದಿತ ಕಣಾವಲು ಕೇಂದ್ರಗಳಾಗಿ ಗುರುತಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕವಾಗಿ NIV (National Institute of Virology) ಗುರುತಿಸಲಾಗಿದ್ದು ಅಗತ್ಯ ಮಾದರಿ ಸಂಗ್ರಹಣೆ, ಪ್ರಯೋಗಾಲಯ ಬಳಕೆಯ ಸಾಮಗ್ರಿಗಳ ಲಭ್ಯತೆ ಹಾಗೂ ಸಕಾಲಿಕ ಪರೀಕ್ಷೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ..

*ಆರೋಗ್ಯ ಸಂಸ್ಥೆಗಳ ಸನ್ನದ್ಧತೆ:*
ಜಿಲ್ಲಾದ್ಯಂತ 04 ತಾಲ್ಲೂಕು ಆಸ್ಪತ್ರೆಗಳು ಹಾಗೂ ಎಲ್ಲಾ ಆರೋಗ್ಯ ಕೇಂದ್ರಗಳಿಗೆ ಅಗತ್ಯವಾದ-ಪಿಪಿಇ ಕಿಟ್, ಎನ್-95 ಮಾಸ್ಕ್ ಮತ್ತು ಒಸೆಮಿವಿರ್ ಔಷಧಿಗಳನ್ನು ಸಮರ್ಪಕ ಪ್ರಮಾಣದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ILI/SARI ಪ್ರಕರಣಗಳನ್ನು ಆರಂಭಿಕ ಹಂತದಲ್ಲೇ ಗುರುತಿಸುವುದು, ನಿರ್ಣಯಿಸುವುದು ಹಾಗೂ ಅಗತ್ಯ ಚಿಕಿತ್ಸೆಯನ್ನು ಒದಗಿಸುವ ಕುರಿತು ಆರೋಗ್ಯ ಸಿಬ್ಬಂದಿಗೆ ಅರಿವು ಮತ್ತು ತರಬೇತಿ ನೀಡಲಾಗಿದೆ.

*ಸೋಂಕು ತಡೆಗಟ್ಟುವಿಕೆ ಮತ್ತು ಸಾರ್ವಜನಿಕ ಜಾಗೃತಿ:*
ಆರೋಗ್ಯ ಇಲಾಖೆಯು ಎಲ್ಲಾ ಆರೋಗ್ಯ ಸೌಲಭ್ಯಗಳಲ್ಲಿ ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕ್ರಮಗಳನ್ನು ಬಲಪಡಿಸಿದ್ದು, ಉಸಿರಾಟದ ನೈರ್ಮಲ್ಯ, ಕೆಮ್ಮುವಾಗ ಅನುಸರಿಸಬೇಕಾದ ಶಿಷ್ಟಾಚಾರ ಮತ್ತು ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಸಾರ್ವಜನಿಕರಿಗೆ ಒತ್ತು ನೀಡಲಾಗುತ್ತಿದೆ.

ಎಲೆಕ್ಟ್ರಾನಿಕ್, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸಮುದಾಯ ಜಾಗೃತಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಮತ್ತು ರೋಗಲಕ್ಷಣಗಳಿರುವ ಸಂದರ್ಭದಲ್ಲಿ ಅನಗತ್ಯವಾಗಿ ಜನಸಂದಣಿ ಇರುವ ಸ್ಥಳಗಳಿಗೆ ತೆರಳುವುದನ್ನು ತಪ್ಪಿಸುವ ಕುರಿತು ಒತ್ತು ನೀಡಲಾಗುತ್ತಿದೆ.

*ಸಾರ್ವಜನಿಕರಿಗೆ ಆರೋಗ್ಯ ಸಲಹೆ/ಸಂದೇಶ:*
* ಋತುಮಾನದ ಜ್ವರದ ಹರಡುವಿಕೆಯನ್ನು ತಡೆಯಲು ಸಾರ್ವಜನಿಕರು ಈ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು:

*ಮಾಡಬೇಕಾದ್ದು:*
* ಸೀನುವಾಗ ಮತ್ತು ಕೆಮ್ಮುವಾಗ ಮೂಗು ಮತ್ತು ಬಾಯಿಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.

* ಸೋಪು ಮತ್ತು ನೀರಿನಿಂದ ಕೈಗಳನ್ನು ನಿಯಮಿತವಾಗಿ ತೊಳೆಯಬೇಕು.

* ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಸೇವಿಸಬೇಕು.

* ರೋಗ ಲಕ್ಷಣಗಳಿರುವ ವ್ಯಕ್ತಿಗಳು ಇತರರಿಂದ ಪ್ರತ್ಯೇಕವಾಗಿರುವುದು ಹಾಗೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.

*ಮಾಡಬಾರದ್ದು:*
* ಕಣ್ಣು, ಮೂಗು ಮತ್ತು ಬಾಯಿಯನ್ನು ಕೈಗಳಿಂದ ಪದೇಪದೇ ಮುಟ್ಟಬಾರದು.

* ಸ್ವಯಂ- ಔಷಧೋಪಚಾರ (Self-Medication) ಮಾಡಬಾರದು.

* ರೋಗ ಲಕ್ಷಣಗಳಿರುವ ಸಂದರ್ಭದಲ್ಲಿ ಕೈಕುಲುಕುವುದನ್ನು ತಪ್ಪಿಸಬೇಕು.

* ರೋಗ ಲಕ್ಷಣಗಳಿರುವಾಗ ಜನಸಂದಣಿ ಇರುವ ಸ್ಥಳಗಳಿಗೆ ತೆರಳಬಾರದು.

* ಬಳಸಿದ ಕರವಸ್ತ್ರ/ನ್ಯಾಪ್ತಿನ್‌ಗಳನ್ನು ಮರುಬಳಕೆ ಮಾಡಬಾರದು.

ಇನ್‌ಫುಯೆಂಜಾ ಸಂಬಂಧಿತ ರೋಗಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ವೈದ್ಯಕೀಯ ಸಲಹೆ ಪಡೆಯುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp

Join Now

Telegram

Join Now

Instagram

Join Now