ವಿಜಯ ದರ್ಪಣ ನ್ಯೂಸ್…..
ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ

ಶಿಡ್ಲಘಟ್ಟ : ಶ್ರೀ ರಾಘವೇಂದ್ರಸ್ವಾಮಿಯ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಶನಿವಾರದಿಂದ ಪ್ರಾರಂಭವಾಯಿತು.
ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ
ಮಠದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವವನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.
ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆಯಿತು. ರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಶ್ರೀ ಗಾಯಿತ್ರಿ ಮಹಿಳಾ ಮಂಡಳಿಯವರಿಂದ ಭಕ್ತಿಗೀತೆಗಳು ಮತ್ತು ವಿದ್ಯಾ ರಂಗನಾಥ್ ಅವರಿಂದ ಭರತನಾಟ್ಯ ಆಯೋಜಿಸಲಾಗಿತ್ತು.
ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ರಾಯರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು ,ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು ಮೆರವಣಿಗೆ ಹಾದು ಹೋದ ರಸ್ತೆಗಳನ್ನು ಸಾರಿಸಿ ರಂಗವಲ್ಲಿ ಹಾಕಿ ಉತ್ಸವಕ್ಕೆ ಸ್ವಾಗತ ಕೋರಲಾಗಿತ್ತು ಮೆರವಣಿಗೆಯಲ್ಲಿ ಮಹಿಳಾ ಸಂಘದ ಸದಸ್ಯರಿಂದ ಕೋಲಾಟ ನಡೆಯಿತು.
ದೇವಾಲಯದ ಆವರಣದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ.ನಾಗರಾಜರಾವ್, ಕಾರ್ಯದರ್ಶಿ ಎನ್. ಶ್ರೀಕಾಂತ್, ಖಜಾಂಚಿ ಆರ್. ಮಧುಸೂದನ್, ಟ್ರಸ್ಟಿಗಳಾದ ಎ.ಎಸ್.ರವಿ, ಬಿ.ಕೃಷ್ಣಮೂರ್ತಿ, ಬಿ.ಆರ್. ಸುಧೀಂದ್ರ,ವಿ.ಕೃಷ್ಣ, ಬಿ.ಆರ್.ರವಿ, ಮಧು,ವೆಂಕಟೇಶ್, ಹರೀಶ್,ಮಂಜುನಾಥ್, ಬಾಸ್ಕರ್, ಹಾಜರಿದ್ದರು.










