--Ads--

ಮಧುಸೂದನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ

On: August 31, 2026 5:51 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಧುಸೂದನ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ ಪಿಆರ್‌ಎಂ ಕನ್ಸ್ಟ್ರಕ್ಷನ್ ಮಾಲೀಕರಾದ ಸಮಾಜಮುಖಿ ಉದ್ಯಮಿ ಮಧುಸೂದನ್ ಅವರಿಗೆ ಐಕಾನ್ ಆಫ್ ಇಂಡಿಯನ್ ಬಿಸಿನೆಸ್ ಸಂಸ್ಥೆಯ ವತಿಯಿಂದ ಪ್ರತಿಷ್ಠಿತ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಳೆದ ಸುಮಾರು 10 ವರ್ಷಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಧುಸೂದನ್ ಅವರು ಗುಣಮಟ್ಟದ ಕಟ್ಟಡ ನಿರ್ಮಾಣದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಮಾಜದ ಸೇವೆಯಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ.

ಮಧುಸೂದನ್ ಅವರ ನಿರ್ಮಾಣ ಕ್ಷೇತ್ರದ ಸಾಧನೆ ಹಾಗೂ ಸಮಾಜಮುಖಿ ಸೇವೆಯನ್ನು ಪರಿಗಣಿಸಿ ಐಕಾನ್ ಆಫ್ ಇಂಡಿಯನ್ ಬಿಸಿನೆಸ್ ಸಂಸ್ಥೆಯ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಮಾರಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ವೈದ್ಯರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ. ಆಂಜನಪ್ಪ ಹಾಗೂ ಐಕಾನ್ ಆಫ್ ಇಂಡಿಯನ್ ಬಿಸಿನೆಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ನಾಯಕರು, ಗಣ್ಯರು, ಸ್ನೇಹಿತರು ಹಾಗೂ ಕುಟುಂಬಸ್ಥರು ಮಧುಸೂದನ್ ಅವರಿಗೆ ವಿಶೇಷ ಗೌರವ ಸಮರ್ಪಿಸಿ ಅಭಿನಂದಿಸಿದರು. ನಿರ್ಮಾಣ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರುವ ಮಧುಸೂದನ್ ಅವರ ಸೇವೆಯನ್ನು ಗಣ್ಯರು ಶ್ಲಾಘಿಸಿದರು.
ಪ್ರ

ಶಸ್ತಿ ಸ್ವೀಕರಿಸಿದ ಮಧುಸೂದನ್ ಅವರು, ತಮ್ಮ ಕಾರ್ಯಗಳನ್ನು ಗುರುತಿಸಿ ಗೌರವಿಸಿರುವ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಮುಂದಿನ ದಿನಗಳಲ್ಲಿಯೂ ಸಮಾಜಕ್ಕೆ ಸಾಧ್ಯವಾದಷ್ಟು ಸೇವೆ ಸಲ್ಲಿಸುವುದಾಗಿ ತಿಳಿಸಿದರು.

WhatsApp

Join Now

Telegram

Join Now

Instagram

Join Now