--Ads--

ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ?

On: September 2, 2026 11:47 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಕುಶಾಲನಗರದ ಮುಖ್ಯ ರಸ್ತೆಗಳಲ್ಲಿ ಬೀದಿ ದನಗಳ ಹಾವಳಿ ಅಧಿಕಾರಿಗಳು ಎಚ್ಚೆತ್ತುಕೊಳ್ಳುವರೇ?

ಕುಶಾಲನಗರ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಬೀದಿ ದನಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸಾರ್ವಜನಿಕರ ಜೀವ ಹಾಗೂ ಆಸ್ತಿಗೆ ಅಪಾಯ ಉಂಟುಮಾಡುತ್ತಿದೆ ವಾಹನ ಸವಾರರು ಆತಂಕದ ನಡುವೆ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಎರಡು ಗೋಮಾತೆಗಳು ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಇದು ಕೇವಲ ಜಾನುವಾರುಗಳ ಸಾವಲ್ಲ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದ ಪ್ರತೀಕವೂ ಆಗಿದೆ ಇಂದು ಗೋಮಾತೆಗಳು ಬಲಿಯಾಗಿದ್ದರೆ ನಾಳೆ ಅಮಾಯಕ ನಾಗರಿಕರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ

ರಸ್ತೆಗಳಲ್ಲಿ ಜಾನುವಾರುಗಳನ್ನು ಅನಿಯಂತ್ರಿತವಾಗಿ ಬಿಟ್ಟು ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅಪಘಾತ ಸಂಭವಿಸಿದ ನಂತರ ಸಂತಾಪ ಸೂಚಿಸುವುದಕ್ಕಿಂತ ಅವುಗಳನ್ನು ತಡೆಯುವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಆಡಳಿತದ ಕರ್ತವ್ಯವಾಗಿದೆ

ಸಂಬಂಧಪಟ್ಟ ಇಲಾಖೆಗಳು ಹಾಗೂ ಸ್ಥಳೀಯ ಆಡಳಿತ ತಕ್ಷಣ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರ ಸುರಕ್ಷತೆ ಮತ್ತು ಗೋಮಾತೆಗಳ ರಕ್ಷಣೆಗೆ ಆದ್ಯತೆ ನೀಡಬೇಕೆಂದು ಕೊಡಗು ಜನ ಅಭಿವೃದ್ಧಿ ಸಮಿತಿ ಆಗ್ರಹಿಸಿದೆ.

WhatsApp

Join Now

Telegram

Join Now

Instagram

Join Now