--Ads--

ಹೆಚ್.ಡಿ.ಕುಮಾರಸ್ವಾಮಿ ಕೆಪಿಎಸ್ಸಿ ದಾಖಲೆ ಬಿಡುಗಡೆ ಮಾಡಿದ್ದಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನ ಖಾಲಿ

On: September 2, 2026 4:51 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಹೆಚ್.ಡಿ.ಕುಮಾರಸ್ವಾಮಿ ಕೆಪಿಎಸ್ಸಿ ದಾಖಲೆ ಬಿಡುಗಡೆ ಮಾಡಿದ್ದಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನ ಖಾಲಿ

ಶಿಡ್ಲಘಟ್ಟ : ಸೆಪ್ಟೆಂಬರ್ -12 ರಂದು ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದು, ಅಗತ್ಯ ದಾಖಲೆ ಬಿಡುಗಡೆ ಮಾಡಿದ್ದೇ ಆದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಾಗುತ್ತದೆ ,ಆಗ ಸತತ 7 ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಅಪಾರ ಆಡಳಿತಾತ್ಮಕ ಅನುಭವ ಹೊಂದಿರುವ ಸಚಿವ ಕೆ.ಎಚ್‌.ಮುನಿಯಪ್ಪ ರಾಜ್ಯದ ಮುಖ್ಯಮಂತ್ರಿ ಆಗಲಿ ಎನ್ನುವುದು ನನ್ನ ಆಶಯ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ಮೇಲೂರಿನ ಅವರ ಗೃಹಕಚೇರಿಯಲ್ಲಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿ, ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುತ್ತಾರೆ ಎಂದು ಯಾರಾದ್ರೂ ಅಂದು ಕೊಂಡಿದ್ರಾ..? ವಾಲ್ಮೀಕಿ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನ ತಪ್ಪಿದೆ ,ಎಚ್.ಡಿ.ಕುಮಾರಸ್ವಾಮಿ ಕೆಪಿಎಸ್ಸಿ ಹಗರಣದಲ್ಲಿ ನಡೆದಿರುವ ಅಕ್ರಮಗಳ ದಾಖಲೆ ಬಿಡುಗಡೆ ಮಾಡಿದ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬರಬಹುದು ಹೀಗಾಗಿ, ಒಂದು ವೇಳೆ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿಯೇ ಬಂದಲ್ಲಿ, ಬಯಲುಸೀಮೆ ಭಾಗದ ನಾಯಕರೊಬ್ಬರು ಮುಖ್ಯಮಂತ್ರಿಯಾಗಲಿ ಎಂದರು.

ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರೆ ನನಗೊಬ್ಬನಿಗೆ ಮಾತ್ರ ಅನುಕೂಲವಾಗಬಹುದು ಕ್ಷೇತ್ರದ ಅಭಿವೃದ್ಧಿ ಶೂನ್ಯ ಆಗಲಿದೆ ,ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಅದು ಹಗಲು ಕನಸಷ್ಟೆ ಎಂದ ಅವರು ,ರಾಜ್ಯದಲ್ಲಿ 2028 ಕ್ಕೆ ಎನ್.ಡಿ.ಎ.ಸರ್ಕಾರ ಬರುವುದು ಗ್ಯಾರಂಟಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದರು.

WhatsApp

Join Now

Telegram

Join Now

Instagram

Join Now