--Ads--

ಕೊಡಗಿನ ಗಡಿಭಾಗದ ಚೆಕ್‌ಪೋಸ್ಟ್‌ಗಳ ಬಲವರ್ಧನೆಗೆ ಕೊಡಗು ಜನ ಅಭಿವೃದ್ಧಿ ಸಮಿತಿಯ ಮನವಿ

On: September 2, 2026 6:09 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕೊಡಗಿನ ಗಡಿಭಾಗದ ಚೆಕ್‌ಪೋಸ್ಟ್‌ಗಳ ಬಲವರ್ಧನೆಗೆ ಕೊಡಗು ಜನ ಅಭಿವೃದ್ಧಿ ಸಮಿತಿಯ ಮನವಿ

ಕೊಡಗು: ಮೇಲೆ ಕಾಣುವ  ದೃಶ್ಯವು ಕೊಡಗು ಜಿಲ್ಲೆಯ ಪ್ರಮುಖ ಗಡಿಭಾಗವಾದ ಪೆರುಂಬಾಡಿ ಚೆಕ್‌ಪೋಸ್ಟ್‌ನದ್ದಾಗಿದೆ ಕಳೆದ ಕೆಲವು ತಿಂಗಳ ಹಿಂದೆಯೇ ಕೊಡಗು ಜನ ಅಭಿವೃದ್ಧಿ ಸಮಿತಿಯು ಈ ಭಾಗದ ನೈಜ ಪರಿಸ್ಥಿತಿಯ ಕುರಿತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಹಿತಿ ನೀಡಿತ್ತು. ರಾತ್ರಿ ವೇಳೆಯ ಮೇಲ್ವಿಚಾರಣೆ ಸಿಸಿ ಕ್ಯಾಮೆರಾ ವ್ಯವಸ್ಥೆ ಸಿಬ್ಬಂದಿಗಳ ಲಭ್ಯತೆ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿತ್ತು
ಕೊಡಗು ಜಿಲ್ಲೆ ಪ್ರಕೃತಿ ಸೌಂದರ್ಯ ಅರಣ್ಯ ಸಂಪತ್ತು, ಕೃಷಿ ಉತ್ಪನ್ನಗಳು ಹಾಗೂ ಪ್ರವಾಸೋದ್ಯಮದ ಮೂಲಕ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿರುವ ಜಿಲ್ಲೆಯಾಗಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಇಲಾಖೆ ಅಬಕಾರಿ ಇಲಾಖೆ ಅರಣ್ಯ ಇಲಾಖೆ ಆರೋಗ್ಯ ಇಲಾಖೆ ಆರ್‌ಟಿಒ ಇಲಾಖೆ ಎಪಿಎಂಸಿ ಹಾಗೂ ಇತರೆ ಸಂಬಂಧಿತ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದು ಕಾಲದ ಅಗತ್ಯವಾಗಿದೆ
ನೆರೆಯ ರಾಜ್ಯಗಳಿಂದ ಜಿಲ್ಲೆಗೆ ಪ್ರವೇಶಿಸುವ ವಾಹನಗಳ ದಾಖಲಾತಿ ಪರಿಶೀಲನೆ ಸರಕು ಸಾಗಾಣಿಕೆಯ ಕಾನೂನುಬದ್ಧತೆ ಸಾರ್ವಜನಿಕ ಆರೋಗ್ಯ ಸುರಕ್ಷತೆ ಅರಣ್ಯ ಸಂಪತ್ತಿನ ಸಂರಕ್ಷಣೆ ಹಾಗೂ ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಗಡಿಭಾಗದ ಚೆಕ್‌ಪೋಸ್ಟ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ.
ಇದಕ್ಕಾಗಿ ಅಗತ್ಯ ಸಿಬ್ಬಂದಿ, ತಾಂತ್ರಿಕ ಸೌಲಭ್ಯಗಳು ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬಂಧಿಸಿದ ಇಲಾಖೆಗಳ ಗಮನ ಸೆಳೆಯಲು ಬಯಸುತ್ತೇವೆ
ಪೆರುಂಬಾಡಿ ಮಾತ್ರವಲ್ಲದೆ ಕುಶಾಲನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಗಡಿಭಾಗದ ಚೆಕ್‌ಪೋಸ್ಟ್‌ಗಳನ್ನು ಬಲಪಡಿಸಿ ಸಾರ್ವಜನಿಕ ಹಿತಾಸಕ್ತಿ ಹಾಗೂ ಜಿಲ್ಲೆಯ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಕೊಡಗು ಜನ ಅಭಿವೃದ್ಧಿ ಸಮಿತಿ ಮನವಿ ಮಾಡುತ್ತದೆ
ಗಡಿಭಾಗಗಳ ಭದ್ರತೆ ಎಂಬುದು ಕೇವಲ ಒಂದು ಇಲಾಖೆಯ ಜವಾಬ್ದಾರಿ ಅಲ್ಲ ಅದು ಪೊಲೀಸ್ ಅಬಕಾರಿ ಅರಣ್ಯ ಆರೋಗ್ಯ ಆರ್‌ಟಿಒ ಎಪಿಎಂಸಿ ಸೇರಿದಂತೆ ಎಲ್ಲಾ ಇಲಾಖೆಗಳ ಸಮನ್ವಯದ ಜವಾಬ್ದಾರಿಯಾಗಿದೆ ಜನರ ಸುರಕ್ಷತೆ ಜಿಲ್ಲೆಯ ಹಿತಾಸಕ್ತಿ ಹಾಗೂ ಉತ್ತಮ ಆಡಳಿತದ ದೃಷ್ಟಿಯಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವರೆಂದು ನಾವು ವಿಶ್ವಾಸ ವ್ಯಕ್ತಪಡಿಸುತ್ತೇವೆ
ಜನರ ಸುರಕ್ಷತೆ ಜಿಲ್ಲೆಯ ಅಭಿವೃದ್ದಿಗೆ ಭದ್ರ ಅಡಿಪಾಯ
ಚಿಕ್ಕಂಡ ಪ್ರಭು ಮಾದಪ್ಪ, ಜಿಲ್ಲಾಧ್ಯಕ್ಷರು
✍️ ಎಂ ಎಂ ದಾವುದ್,ಸಂಸ್ಥಾಪಕರು ಕೊಡಗು ಜನ ಅಭಿವೃದ್ಧಿ ಸಮಿತಿ

WhatsApp

Join Now

Telegram

Join Now

Instagram

Join Now