--Ads--

ಸೂಕ್ತ ದಾಖಲೆ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ: ಜಿಲ್ಲಾಧಿಕಾರಿ 

On: September 4, 2026 12:11 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026

ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ವರೆಗೆ ಅವಕಾಶ

ಸೂಕ್ತ ದಾಖಲೆ ನೀಡಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ : ಜಿಲ್ಲಾಧಿಕಾರಿ 

ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆ.24:

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ ಅಧಿಕಾರಿಗಳಿಗೆ ನಿಗದಿತ ನಮೂನೆ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ಎನ್ . ಅನುರಾಧ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 24 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದ್ದು ಕರಡು ಮತದಾರರ ಪಟ್ಟಿಯಲ್ಲಿ 7,96,138 ಮತದಾರರ ಹೆಸರಿದೆ. ಅರ್ಹ ಮತದಾರರು ಪಟ್ಟಿಯಲ್ಲಿ ಬಿಟ್ಟು ಹೊಗಿದ್ದರೆ ಬಿಎಲ್ಒಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸಿ. ದಾಖಲೆಗಳನ್ನು ಪರಿಶೀಲಿಸಿ ಹೆಸರು ಸೇರ್ಪಡೆ ಮಾಡಲಾಗುವುದು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಲ್ಕು ಮತ ಕ್ಷೇತ್ರಗಳಲ್ಲಿ ಫಾರ್ಮ್ 06 ಮೂಲಕ 764 ಹಕ್ಕುಗಳು, 677 ಹೊಸ ಯುವ ಮತದಾರರ ಸೇರ್ಪಡೆ ಅರ್ಜಿ ಸೇರಿ 1441 ಫಾರ್ಮ್ 6 ಮೂಲಕ ಅರ್ಜಿ ಸ್ವೀಕರಿಸಲಾಗಿದೆ. ಫಾರ್ಮ್ 07 ರಲ್ಲಿ 06, ಫಾರ್ಮ್ 08 ರಲ್ಲಿ 1169 ಅರ್ಜಿ ಸ್ವೀಕರಿಸಲಾಗಿದೆ ಎಂದು ಡಿಸಿ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಮ್ಯಾಪಿಂಗ್ ಆಗದಿರುವ, ಪಟ್ಟಿಯಲ್ಲಿ ಹೆಸರು, ವಿಳಾಸ, ಇನ್ನಿತರೆ ತಿದ್ದುಪಡಿಗಳಿರುವ 56349 ಮಂದಿಗೆ ನೋಟಿಸ್ ನೀಡಲಾಗುತ್ತಿದೆ. ಪ್ರಸ್ತುತ 22,791 ಜನರಿಗೆ ನೋಟಿಸ್ ನೀಡಲಾಗಿದ್ದು, ಉಳಿದ ನೋಟಿಸ್ ಗಳನ್ನು ನೀಡಲಾಗುತ್ತಿದೆ ಎಂದರು.

ಸಿಇಒ ಡಾ. ವಾಸಂತಿ ಅಮರ್ ಮಾತನಾಡಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 19, 20 ರಂದು ವಿಶೇಷ ಆಂದೋಲನ ಕಾರ್ಯಕ್ರಮ ಮೂಲಕ ಕರಡು ಮತದಾರ ಪಟ್ಟಿಯನ್ನು ವಾರ್ಡ್ ಸಭೆ, ಗ್ರಾಮ ಸಭೆಗಳಲ್ಲಿ ಮತದಾರರಿಗೆ ಓದಿ ಹೇಳಲು ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಯುವ ಮತದಾರರನ್ನು ನಮೂನೆ 06 ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅತಿ ಹೆಚ್ಚು ಹಕ್ಕುಗಳು,ಆಕ್ಷೇಪಣೆ, ನೋಟಿಸ್ ನೀಡಿರುವ ಮತಗಟ್ಟೆಗಳನ್ನು ಗುರುತಿಸಿ ಸಮಿತಿಗಳ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವಂತೆ ಖಾತ್ರಿ ಪಡೆಸಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಮತದಾರರ ನೋಂದಣಾಧಿಕಾರಿ ಶಿವಕುಮಾರ್, ರಮೇಶ್, ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now