ವಿಜಯ ದರ್ಪಣ ನ್ಯೂಸ್……
ಸಂಪನ್ನಗೊಂಡ ತರಂಗಿಣಿ–2K26 ರ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ

ಬೆಂಗಳೂರು :
ಬೆಂಗಳೂರಿನ ಕೆಂಗೇರಿ ಸ್ಯಾಟಲೈಟ್ ಟೌನ್ನ ಶೇಷಾದ್ರಿಪುರಂ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ವತಿಯಿಂದ IQAC ಆಶ್ರಯದಲ್ಲಿ ಆಯೋಜಿಸಿದ್ದ ‘ತರಂಗಿಣಿ–2K26’ ರಾಜ್ಯಮಟ್ಟದ ಅಂತರ್ ಕಾಲೇಜು ಉತ್ಸವ ಅದ್ದೂರಿಯಾಗಿ ಜರುಗಿತು.
ರಾಜ್ಯದ ವಿವಿಧ ಭಾಗಗಳ ಸುಮಾರು 35 ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಾಂಸ್ಕೃತಿಕ, ಕ್ರೀಡಾ ಹಾಗೂ ಬೌದ್ಧಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಸುಪ್ರಸಿದ್ಧ ನಟ–ನಿರ್ಮಾಪಕ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಮತ್ತು ಹಾಸ್ಯನಟ ಮಹಾಂತೇಶ್ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾರೋಪದಲ್ಲಿ ನಟ, ಗಾಯಕ ಹಾಗೂ ರಂಗಕಲಾವಿದ ಕಲಾರತಿ ಮಹದೇವ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಸುರಾನಾ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ನಾಗೇಶ ಎನ್. ಗೌರವ ಅತಿಥಿಯಾಗಿ ಉಪಸ್ಥಿತರಿದ್ದರು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಲಾಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯರಾಮ ಅವರು ಅಧ್ಯಕ್ಷತೆ ವಹಿಸಿದ್ದರು, ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಆರ್.ಮಂಜುನಾಥ್ ಮುಖ್ಯ ಅತಿಥಿಗಳಾಗಿದ್ದರು,
ಸಮಾರಂಭದ ಸಂಯೋಜಕರಾದ ಡಾ.ಪೂರ್ಣಿಮಾ ಎಸ್. ಮತ್ತು ಹರೀಶ್ ಜಿ., ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಮತ್ತು ತಂಡಭಾವನೆಗೆ ವೇದಿಕೆ ಕಲ್ಪಿಸಿದ ‘ತರಂಗಿಣಿ–2K26’ ಯಶಸ್ವಿಯಾಗಿ ಸಂಪನ್ನಗೊಂಡಿತು.









