ವಿಜಯ ದರ್ಪಣ ನ್ಯೂಸ್…..
ಅಹವಾಲು ನಿಮ್ಮದು, ಪರಿಹಾರ ನಮ್ಮದು. ಮೈಸೂರಿನ ಪ್ರಜಾ ಸೇವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್

ತಾಂಡವಪುರ ಸೆಪ್ಟೆಂಬರ್ 5 ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡಿರುವ ‘ಪ್ರಜಾಸೇವೆ’ ಅಭಿಯಾನಕ್ಕೆ ಇಂದು ಮೈಸೂರು ಜಿಲ್ಲೆಯ ಹುಣಸೂರಿನ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರ ಸಚವರು ಆದ ಡಾ. ಯತೀಂದ್ರ ಸಿದ್ರಾಮಯ್ಯನವರು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವರು ಮತ್ತು ಶಾಸಕರ ಗಮನಕ್ಕೆ ತಂದು ಮನವಿ ಸಲ್ಲಿಸಿದರು ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ಡಾ. ಯತೀಂದ್ರ ಸಿದ್ರಾಮಯ್ಯನವರು ಸರ್ಕಾರ ಸಾರ್ವಜನಿಕರಿಗೋಸ್ಕರ ಪ್ರಜಾ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಅಧಿಕಾರಿಗಳೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಕೇಳಿ ಸರಿಪಡಿಸಿ ಬಗೆಹರಿಸುವ ಹಾಗೂ ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ, ತ್ವರಿತವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಕಡಕ್ ಸೂಚನೆ ನೀಡಿದರು
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಾದ ಈ ಕಾರ್ಯಕ್ರಮವು ನಮ್ಮ ಸರ್ಕಾರದ ಜನಪರ ನಿಲುವಿಗೆ ನೇರ ಸಾಕ್ಷಿ. ರಾಜ್ಯಾದ್ಯಂತ ಆರಂಭಗೊಂಡಿರುವ ಈ ಅಭಿಯಾನವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ.
ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ನಡೆಯಲಿರುವ ‘ಪ್ರಜಾಸೇವೆ’ಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡುತ್ತೇನೆ.ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ; ಪರಿಹಾರ ನೀಡುವುದು ನಮ್ಮ ಬದ್ಧತೆ.
ಈ ಸಂದರ್ಭದಲ್ಲಿ ಹುಣಸೂರು ಶಾಸಕ ಜಿ.ಡಿ. ಹರೀಶ್ ಗೌಡ, ಜಿಲ್ಲಾ ಪಂಚಾಯತ್ ಸಿಇಓ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರನಾಥ್, ಡಿಸಿಎಫ್ ಸೀಮಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಮುಖಂಡರು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು










