--Ads--

ಸಮಾಜಕ್ಕೆ ಶಿಕ್ಷಕರು ಆಧಾರ ಸ್ತಂಭಗಳು ವಿದ್ಯಾದಾನ ಶ್ರೇಷ್ಠದಾನ: ಸಚಿವ ಮುನಿಯಪ್ಪ

On: September 7, 2026 3:02 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ

ಸಮಾಜಕ್ಕೆ ಶಿಕ್ಷಕರು ಆಧಾರ ಸ್ತಂಭಗಳು ವಿದ್ಯಾದಾನ ಶ್ರೇಷ್ಠದಾನ : ಸಚಿವ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05,2026 :

ವಿದ್ಯಾರ್ಥಿಗಳ ಜೀವನದಲ್ಲಿ ಸರಿಯಾದ ಮಾರ್ಗದರ್ಶನ ನೀಡಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದಾದದ್ದು . ಸಮಾಜಕ್ಕೆ ಶಿಕ್ಷಕರು ಆಧಾರಸ್ತಂಭಗಳು. ಸಮಾಜದ ಅತಿ ಶ್ರೇಷ್ಠ ವಾದ ವಿದ್ಯಾದಾನ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಭಾರತರತ್ನ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ -2026 ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಮತ್ತು ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದರು.

ಶಿಕ್ಷಕರು ನಮ್ಮ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುವ ವಿದ್ಯಾರ್ಥಿಗಳನ್ನು ರೂಪಿಸುತ್ತಾರೆ.ಸಮಾಜಕ್ಕೆ ಶಿಕ್ಷಕರು ನೀಡುವ ಅಮೂಲ್ಯ ಕೊಡುಗೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ದಿನ ಇದಾಗಿದೆ ಎಂದರು.

ಮಹಾತ್ಮ ಗಾಂಧಿಜಿಯವರು ತಿಳಿಸಿದಂತೆ ಇಂದಿನ ಮಕ್ಕಳೆ ನಾಳಿ‌ನ ಪ್ರಜೆಗಳು.ಶಿಕ್ಷಣದ ಜೊತೆಗೆ ಮಕ್ಕಳ ಭವಿಷ್ಯವನ್ನು ರೂಪಿಸುವ ಜವಾಬ್ದಾರಿ ಶಿಕ್ಷಕರದ್ದಾಗಿದೆ.ತಂದೆ,ತಾಯಿಯ ನಂತರ ಶಿಕ್ಷಕರಿಗೆ ಮಹತ್ವದ ಸ್ಥಾನವಿದೆ. ಶಿಕ್ಷಕರು ಸೇವಾ ಮನೋಭಾವದಿಂದ ಮಕ್ಕಳಿಗೆ ಶಿಕ್ಷಣ ನೀಡಬೇಕು. ಸಮಾಜದಲ್ಲಿ ಮಕ್ಕಳು ಸುಸಂಸ್ಕೃತರಾಗಿ ಬೆಳೆಯಬೇಕು ಅದಕ್ಕೆ ನೈತಿಕತೆಯ ಮೌಲ್ಯದ ಕುರಿತು ಅರಿವು ಮೂಡಿಸಿ ಎಂದರು.

ಶಿಕ್ಷಣಕ್ಕೆ ಸರ್ಕಾರದಿಂದ ಬರಬೇಕಾದ ಎಲ್ಲಾ ರೀತಿಯ ನೆರವು ನೀಡಲು ಸಾದಾ ಸಿದ್ದರಾಗಿದ್ದೇವೆ ಎಂದರು.

ಅಗ್ರಗಣ್ಯ ದೇಶಗಳ ಜೊತೆಗೆ ನಮ್ಮ ದೇಶ ಬೆಳೆಯಬೇಕು. ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಿ ದೇಶದ ಅಭಿವೃದ್ಧಿಗೆ ಅವರನ್ನು ಬೆಳೆಯುವಂತೆ ಮಾಡುವುದು ಶಿಕ್ಷಕರ ಕೈಯಲ್ಲಿದೆ ಎಂದರು.

ಜಿಲ್ಲಾಧಿಕಾರಿ ಡಾ.ಕೆ.ಎನ್. ಅನುರಾಧ ಮಾತನಾಡಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ನಮ್ಮ ಪರಂಪರೆಯಲ್ಲಿ ಶಿಕ್ಷಣಕ್ಕೆ ವಿಶೇಷ ಸ್ಥಾನ ಮಾನವಿದೆ. ಶಿಕ್ಷಕರು ಸಮಾಜ ಕಟ್ಟುವಲ್ಲಿ ಹಾಗೂ ಸಮಾಜಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸುವ ದಿನ.

ಆಧುನಿಕ ತಂತ್ರಜ್ಞಾನ, ಎಐ ಮಕ್ಕಳಿಗೆ ಅಂಗೈಯಲ್ಲಿ ಮಾಹಿತಿ ನೀಡುತ್ತದೆ. ಆದರೆ ನಿಜವಾದ ಜ್ಞಾನ, ಅಂತಃಶಕ್ತಿ, ಪ್ರಾಯೋಗಿಕ ಜ್ಞಾನ ಶಿಕ್ಷಕರಿಂದ ಮಾತ್ರ ಸಿಗಲು ಸಾಧ್ಯ. ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ‌ಮನೋಸ್ಥೈರ್ಯ ಜೀವನದಲ್ಲಿ ನೈತಿಕ ಮೌಲ್ಯವನ್ನು ಅಳವಡಿಸಲು ಪ್ರೇರಣೆ ನೀಡುವ ಕೆಲಸ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಏಳಿಗೆ ಆದಾಗ ಮಾತ್ರ ದೇಶ ಹೆಚ್ಚು ಹೆಚ್ಚು ಅಭಿವೃದ್ಧಿಗೊಳ್ಳುವುದು ಎಂದರು.

ಬೆಂಗಳೂರು ಶಿಕ್ಷಣ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರು ಒತ್ತಡದ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ, ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಶಿಕ್ಷಣದ ಜೊತೆಗೆ ಇತರೆ ಕೆಲಸಗಳು ಶಿಕ್ಷಕರಿಗೆ ಹೆಚ್ಚಾಗಿದೆ. ಅವರಿಗೆ ಪಾಠ ಮಾತ್ರ ಮಾಡಲು ಅವಕಾಶ ನೀಡಬೇಕು. ಪೋಷಕರು ವಿದ್ಯಾರ್ಥಿಗಳ ಅಂಕಿ ಅಂಶಗಳ ಆಧಾರಿತ ಫಲಿತಾಂಶಕ್ಕೆ ಮಹತ್ವ ಕೊಡುತ್ತಾರೆ ಜೊತೆಗೆ ಮಕ್ಕಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹ ಪ್ರಾಮುಖ್ಯತೆ ನೀಡಬೇಕು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಎಸ್.ಎಲ್.ಸಿ ಫಲಿತಾಂಶದಲ್ಲಿ 4ನೇ ಸ್ಥಾನದಲ್ಲಿ ರುವುದು ಶ್ಲಾಘನೀಯ ಎಂದರು

ಹಾಸ್ಯ ಕಲಾವಿದೆ, ವಾಗ್ಮಿಗಳು ಹಾಗೂ ಭಾಷಣಕರರಾದ ಸುಧಾ ಬರಗೂರು ಅವರು ವಿಶೇಷ ಉಪನ್ಯಾಸ ನೀಡಿ ಭಾರತ ಅತ್ಯಂತ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಹೊಂದಿರುವ ದೇಶ. ಸಮಾಜದಲ್ಲಿನ ಮಹಾನ್ ವ್ಯಕ್ತಿಗಳಾದ ಬುದ್ಧ, ಬಸವಣ್ಣ, ಜ್ಯೋತಿಭಾ ಫುಲೆ, ಸಾವಿತ್ರಿಬಾಯಿ ಫುಲೆ, ಡಾ.ಬಿ.ಆರ್ ಅಂಬೇಡ್ಕರ್ ಅವರು ಸಮಾಜದ ಅನಿಷ್ಟ ಪದ್ಧತಿಗಳನ್ನು ಧಿಕ್ಕರಿಸಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು.

ಅಂದಿನ ಕಾಲದಲ್ಲಿ ಶಿಸ್ತಿನ ಪಾಠ ಈಗಿನ ಕಾಲಕ್ಕೆ ಮಾದರಿ, ಎಲ್ಲರೂ ಒಂದಲ್ಲ ಒಂದು ದಿನ ನಿವೃತ್ತಿ ಹೊಂದುವವರೇ ಆದರೆ ಅವರು ನೀಡಿರುವ ಕೊಡುಗೆಗಳು, ಗುರುತುಗಳು ಅಜರಾಮರವಾಗಿರಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡಿ ಹಲವಾರು ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.

ಜಿಲ್ಲೆಯ 15 ಶಿಕ್ಷಕರಿಗೆ ಅತ್ಯುತ್ತಮ ಪ್ರಶಸ್ತಿ, ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ , ಸಿಇಓ ವಾಸಂತಿ ಅಮರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಅಧ್ಯಕ್ಷರು ರಾಜಣ್ಣ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು (ಆಡಳಿತ) ಕೆ.ಸಿ.ರಮೇಶ್, ಉಪ ನಿರ್ದೇಶಕರು (ಅಭಿವೃದ್ಧಿ) ಹನುಮಂತರಾಯ ಡಿ, ಬಿ.ಇ.ಓ ಲಲಿತಮ್ಮ ಎಂ, ಜಿಲ್ಲಾ ನೋಡಲ್ ಅಧಿಕಾರಿ ಮುರಳಿ ಎಂ, ತಾಲ್ಲೂಕು ನೋಡಲ್ ಅಧಿಕಾರಿ ಅನಂತ ಎ, ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ಅಧ್ಯಕ್ಷರು ಯತೀಶ್, ಕಾರ್ಯದರ್ಶಿ ಮಂಜುನಾಥ, ಖಜಾಂಚಿ ಪದ್ಮಾವತಿ ಹರೀಶ್, ನೌಕರರ ಸಂಘ ಉಪಾಧ್ಯಕ್ಷ ಆದರ್ಶ್, ನಿರ್ದೇಶಕರು ಶ್ರೀನಿವಾಸ್, ಜಯಪ್ರಕಾಶ್, ನೌಕರರ ಸಂಘದ ಗೌರವ ಅಧ್ಯಕ್ಷ ನಾಗೇಶ್,ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now