--Ads--

ಲೆಜೆಂಡ್ಸ್ ಇ ಟೆಕ್ನೋ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

On: September 7, 2026 8:28 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಲೆಜೆಂಡ್ಸ್ ಇ ಟೆಕ್ನೋ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಲೆಜೆಂಡ್ಸ್ ಇ ಟೆಕ್ನೋ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.

ಶಾಲೆಯ ವಿದ್ಯಾರ್ಥಿಗಳು ರಾಧೆ–ಕೃಷ್ಣರ ವೇಷಧರಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪುಟಾಣಿ ಕೃಷ್ಣರು ಹಾಗೂ ರಾಧೆಯರ ಆಕರ್ಷಕ ವೇಷಭೂಷಣಗಳು ಎಲ್ಲರ ಗಮನ ಸೆಳೆದವು. ವಿದ್ಯಾರ್ಥಿಗಳ ಉತ್ಸಾಹ ಹಾಗೂ ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯಸ್ಥರಾದ ಯೆರೇಗೌಡ, ಶ್ರೀ ಕೃಷ್ಣನ ಜೀವನ ಮತ್ತು ಸಂದೇಶಗಳು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಿವೆ. ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದು ತಿಳಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಕಲಾವತಿ ಯರೇಗೌಡ ಮಾತನಾಡಿ, ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸದ ವಿಚಾರ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಸಂಭ್ರಮದಿಂದ ನೆರವೇರಿಸಿದರು.

WhatsApp

Join Now

Telegram

Join Now

Instagram

Join Now