ವಿಜಯ ದರ್ಪಣ ನ್ಯೂಸ್…
ಅಂಜನಮೂರ್ತಿಗೆ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪ್ರಧಾನ

ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನ ಜ್ಞಾನಜ್ಯೋತಿ ಶಾಲೆ ಮತ್ತು ಪಿಯು ಕಾಲೇಜಿನ ಮುಖ್ಯಶಿಕ್ಷಕ ಎಂ.ಕೆ..ಅಂಜನಾಮೂರ್ತಿ ಅವರಿಗೆ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ನೀಡಲಾಯಿತು.
ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಜ್ಞಾನ ಜ್ಯೋತಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ 30 ವರ್ಷ ಹಿಂದಿ ವಿಷಯ ಬೋಧಕರಾಗಿ ಹಾಗೂ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು, ಜೀವಮಾನದ ಸಾಧನೆ ಪರಿಗಣಿಸಿ ಅವರಿಗೆ ಪ್ರಶಸ್ತಿ ನೀಡಲಾಗಿದೆ.
ಈ ಸಂದರ್ಭದಲ್ಲಿ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಕೆ.ಗುಡಿಯಪ್ಪ, ಕಾರ್ಯದರ್ಶಿ ಬಿ.ಎಂ. ರಾಜೀವ್‌ಕುಮಾರ್, ಪ್ರಾಂಶುಪಾಲೆ ಪಿ.ಮನುಶ್ರೀ ಹಾಗೂ ಸಿಬ್ಬಂದಿ ಹಾಜರಿದ್ದರು.







