--Ads--

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150ಸ್ಥಾನ ಗೆಲುವಿಗೆ ಶ್ರಮಿಸುತ್ತೇನೆ: ನೆ.ಲ.ನರೇಂದ್ರಬಾಬು

On: September 11, 2026 11:10 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150ಸ್ಥಾನ ಗೆಲುವಿಗೆ ಶ್ರಮಿಸುತ್ತೇನೆ: ನೆ.ಲ.ನರೇಂದ್ರಬಾಬು

ಬೆಂಗಳೂರು: ಮೌರ್ಯ ಹೋಟೆಲ್ ಸಭಾಂಗಣ: ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬುರವರು ಬಿಜೆಪಿ ಪಕ್ಷದ ಹಿಂದುಳಿದ ವರ್ಗ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ , ಮುಂದಿನ ರಾಜಕೀಯ ನಡೆ ಕುರಿತು ಮಾಧ್ಯಮಗೋಷ್ಠಿ ಏರ್ಪಡಿಸಿದ್ದರು.

ನೆ.ಲ.ನರೇಂದ್ರಬಾಬುರವರು ಮಾತನಾಡಿ ಮಹಾನಗರ ಪಾಲಿಕೆ ಸದಸ್ಯನಾಗಿ ಮೂರು ಬಾರಿ ಮತ್ತು ಎರಡು ಬಾರಿ ಶಾಸಕನಾಗಿ ಕಳೆದ 40ವರ್ಷಗಳಿಂದ ಸಾರ್ವಜನಿಕರ ಬೆಂಬಲದಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ.

ಇಂದು ಬಿಜೆಪಿ ಪಕ್ಷಕ್ಕೆ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 10ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ನನ್ನನ ಸಮರ್ಪಣೆ ಮಾಡಿಕೊಂಡೆ ಅದರೆ ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಮತ್ತು ನನ್ನ ಕಾರ್ಯಕರ್ತರನ್ನು ದೂರಮಾಡಿದರು ಮತ್ತು ನನ್ನ ವಿರುದ್ದ ಪಿತೂರಿ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲ್ಲಿಲ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಸುರೇಶ್ ಕುಮಾರ್, ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಗೋಪಾಲಯ್ಯರವರ ಪರ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದೆ.

ಜಾಣ ಕುರುಡು, ಜಾಣ ಮೌನ ಬಿಜೆಪಿ ಪಕ್ಷ ಮಾಡುತ್ತಿದೆ. ಪಕ್ಷಕ್ಕಾಗಿ ತ್ಯಾಗ ಮಾಡಿ ಎಂದರು ಸರ್ಕಾರ ಬಂದ ಮೇಲೆ ನಮ್ಮ ಕಡೆ ನೋಡಲ್ಲಿಲ. ವಿಧಾನಸಭಾ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಟಿಕೇಟು ನೀಡಲ್ಲಿಲ, ಕೆಲಸ ಮಾಡುವವರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆಯಿಲ್ಲ. ಹಿಂಬಾಲಕರಿಗೆ ಮಾತ್ರ ಅವಕಾಶ.

ಬಿಜೆಪಿ ಪಕ್ಷ ತಂದೆ, ಮಕ್ಕಳ ಪಕ್ಷವಾಗಬಾರದು. ಇಡಿ ರಾಜ್ಯ ನಾಲ್ಕು ಬಾರಿ ಪ್ರವಾಸ ಮಾಡಿದರು ನನ್ನನು ಚನ್ನಾಗಿ ಬಳಸಿಕೊಂಡರು. ಎರಡು ವಿಧಾನಸಭಾ ಕ್ಷೇತ್ರ ಬಿಜೆಪಿ ಗೆಲುವಿನಲ್ಲಿ ನಾನು ಮತ್ತು ನನ್ನ ಕಾರ್ಯಕರ್ತರ ಶ್ರಮವಿದೆ.

ಬೋರ್ಡ್, ಕಾರ್ಪೋರೇಷನ್ ಗಳಲ್ಲಿ ಕಾರ್ಯಕರ್ತರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರೆ ಬಿಜೆಪಿ ಪಕ್ಷ ಜಾಣ ಕುರುಡು ರೀತಿಯಂತೆ ವರ್ತಿಸಿದರು.

ಕಾಂಗ್ರೆಸ್ ಪಕ್ಷ ನನಗೆ ಹೆಚ್ಚಿನ ಅವಕಾಶ ನೀಡಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ನೇತೃತ್ವದಲ್ಲಿ ಉತ್ತಮ ಸರ್ಕಾರ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ರವರ ಸಾರಥ್ಯದಲ್ಲಿ ಪಕ್ಷ ಸಂಘಟನೆ ರಾಜ್ಯಾದ್ಯಂತ ಬಿರುಸಿನಿಂದ ಜರುಗುತ್ತಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತೀರ್ಮಾನವೇ ಅಂತಿಮವಾಗಿದೆ ನಿಷ್ಟಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲ.

ರಾಜ್ಯದ ಸಮಸ್ಯೆಗಳಿಗೆ ಬಿಜೆಪಿ ಸಂಸದರು ಸ್ಪಂದಿಸುವುದಿಲ್ಲ.

ನನ್ನ ಮತ್ತು ಜೊತೆಯಲ್ಲಿ ಇರುವ ಸ್ನೇಹಿತರು, ಕಾರ್ಯಕರ್ತರ ಜೊತೆಯಲ್ಲಿ ಸೆಪ್ಟಂಬರ್ 13ನೇ ತಾರೀಖು ಕೆಪಿಸಿಸಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ರವರ ಸಮ್ಮುಖದಲ್ಲಿ ಕಾರ್ಯಕರ್ತರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 150ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತನಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

WhatsApp

Join Now

Telegram

Join Now

Instagram

Join Now

ಇದನ್ನೂ ಓದಿ

ಕರ್ನಾಟಕದ ಸಾಂಸ್ಕೃತಿಕ ಲೋಕಕ್ಕೆ ದಿಗ್ಗಜರ ಕೊಡುಗೆ ಅನನ್ಯ ಶ್ರೀ ದಿನೇಶ್ ಗುಂಡೂರಾವ್

ಮೈಶುಗರ್ ರೈತರಿಗೆ ಸಿಹಿ ಸುದ್ದಿ – 2 ಲಕ್ಷ ಟನ್ ಕಬ್ಬಿಗೆ ಬಟವಾಡೆ ಬಿಡುಗಡೆ, ನಾಳೆಯಿಂದಲೇ DBT ಮೂಲಕ ರೈತರ ಖಾತೆಗೆ ಹಣ”

ಬ್ರಾಹ್ಮಣರ ಏಳಿಗೆಗಾಗಿ ಮಹಾಸಭಾದ ಶ್ರೇಯೋಭಿವೃದ್ಧಿಗಾಗಿ ವಿಶೇಷಪೂಜೆ ಮತ್ತು ಹೋಮ ಕಾರ್ಯಕ್ರಮ-ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ

ಗುರುವಾಗುವುದಕ್ಕಿಂತ ನರ್ತಕಿಯಾದರೆ ಮನೋಲ್ಲಾಸ ಹೆಚ್ಚುತ್ತದೆ : ಡಾ.ನರ್ತಕಿ ನಟರಾಜನ್.

ಅಂತಾರಾಷ್ಟ್ರೀಯ ದೇಹಧಾರ್ಢ್ಯ ಪಟು ಜಿಮ್ ರವಿ ಅವರ “ರವಿ ನೀನು ಆಗಸದಲ್ಲಿ” ಕೃತಿ ಬಿಡುಗಡೆ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

“6 ಸಾವಿರ ಕ್ಯೂಸೆಕ್ ಆದೇಶ ಅಸಂಬದ್ಧ, ನೋವು ತಂದಿದೆ – 6 ಸಾವಿರವೂ ಅಸಾಧ್ಯ, ಶೂನ್ಯ ನೀರಿಗೆ ನಮ್ಮ ಹೋರಾಟ: ಸಚಿವ ಚಲುವರಾಯಸ್ವಾಮಿ”