ವಿಜಯ ದರ್ಪಣ ನ್ಯೂಸ್….
ದೊಡ್ಡ ಕವಲಂದೆ ಗ್ರಾಮದ ಶಾದಿ ಮಹಲ್‌ನಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ
ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್

ತಾಂಡವಪುರ ಸೆಪ್ಟೆಂಬರ್ 12 ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವದೊಡ್ಡ ಕವಲಂದೆ ಗ್ರಾಮದ ಶಾದಿ ಮಹಲ್‌ನಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿದ ಶಾಸಕ ದರ್ಶನ್ ಧ್ರುವನಾರಾಯಣ್ ರವರು ಆಗಲೇ ಇದ್ದ ಅಧಿಕಾರಿಗಳಿಗೆ ಸಾರ್ವಜನಿಕ ಸಮಸ್ಯೆಗಳಿಗೆ ಸಕಲದಲ್ಲಿ ಸ್ಪಂದಿಸಿ ಎಂದು ಸೂಚನೆ ನೀಡಿದರು.
ದೊಡ್ಡ ಕವಲಂದೆ ಹೋಬಳಿ ಮಠದ ಈ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಹೋಬಳಿ ಮಠದ ಸಾರ್ವಜನಿಕರು ತಮ್ಮ ತಮ್ಮ ಸಮಸ್ಯೆಗಳನ್ನು ಶಾಸಕರ ಬಳಿ ಹೇಳಿಕೊಳ್ಳುವ ಮೂಲಕ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಶಾಸಕರು
ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು
ಜನರ ಬಳಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವುದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಹಾಗೂ ಪ್ರತಿಯೊಂದು ಅಹವಾಲಿಗೂ ಪರಿಹಾರ ದೊರಕುವಂತೆ ಮಾಡುವುದು ಪ್ರಜಾ ಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದ ಅವರು ಈ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ ಎಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಹಲಯದಂತ ನೋಡಿಕೊಳ್ಳಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ರವರು ತಾಲೂಕು, ತಹಸೀಲ್ದಾರ್ ಸ್ಮಿತಾ ರಾಮು ತಾಲೂಕು ಪಂಚಾಯಿತಿ ಕಾರ್ಯನಿರ್ವಾಧಿಕಾರಿ, ಜೆರಾಲ್ಡ್ ರಾಜೇಶ್ , ನಗರಸಭಾ ಪೌರಯುಕ್ತರಾದ ಬಸವರಾಜ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡ ಕವಲಂದೆ ಹೋಬಳಿಯ ಸಾರ್ವಜನಿಕರು ಭಾಗಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು











