ವಿಜಯ ದರ್ಪಣ ನ್ಯೂಸ್….
20 ಕ್ಕೆ ಸಾಹಿತಿ ಕೆ.ಎಂ.ರೇವಣ್ಣ ಸರ್ವಾಧ್ಯಕ್ಷತೆಯಲ್ಲಿ 16 ನೇ ಕನ್ನಡ ಸಾಹಿತ್ಯ, ಸಂಸ್ಕೃತಿ ಸಮ್ಮೇಳನ
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಇದೇ ತಿಂಗಳು 20 ನೇ ತಾರೀಖು ಭಾನುವಾರ ಬೆಳಗ್ಗೆ 9 30 ರಿಂದ ಮಧ್ಯಾಹ್ನ 2 00 ಗಂಟೆಯವರೆಗೆ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಹಿರಿಯ ಸಾಹಿತಿ, ನಿವೃತ್ತ ತಹಶೀಲ್ದಾರ್ ಶ್ರೀ ಕೆ.ಎಂ. ರೇವಣ್ಣ ಅವರ ಸರ್ವಾಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ 16 ಕನ್ನಡ ಸಾಹಿತ್ಯ,ಸಂಸ್ಕೃತಿ ಸಮ್ಮೇಳನ ಆಯೋಜಿಸಿದೆ. ಸಮ್ಮೇಳನವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದು, ‘ಆನು ಒಲಿದಂತೆ ಹಾಡುವೆ ‘ ಅಭಿನಂದನೆ ಗ್ರಂಥವನ್ನು ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ.ಸಿ.ಸೋಮಶೇಖರ್ ಲೋಕಾರ್ಪಣೆ ಮಾಡುವರು.
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ.ವೂಡೇ ಪಿ.ಕೃಷ್ಣ 80 ವರ್ಷಕ್ಕೆ ಪಾದಾರ್ಪಣೆ ಮಾಡಿರುವ ರೇವಣ್ಣ ಅವರಿಗೆ ‘ ಕುವೆಂಪು ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡುವರು. ಮುಖ್ಯ ಅತಿಥಿಗಳಾಗಿ ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಬೈರಮಂಗಲ ರಾಮೇಗೌಡ ಆಗಮಿಸುವರು. ಸಮಾರಂಭದ ಅಧ್ಯಕ್ಷತೆಯನ್ನು ಪದ್ಮಶ್ರೀ ಪುರಸ್ಕೃತ ಹಿರಿಯ ಸುಮಂಗಲಿ ಸೇವಾಶ್ರಮದ ಡಾ.ಎಸ್.ಜಿ.ಸುಶೀಲಮ್ಮ ವಹಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ) ಪ್ರಾಸ್ತಾವಿಕ ನುಡಿಗಳಾಡುವರು. ಅಂದು ಮಧ್ಯಾಹ್ನ ನಡೆಯುವ ವಿಚಾರ ಸಂಕಿರಣ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಲೇಖಕಿ ಇಂದಿರಾ ಕೃಷ್ಣಪ್ಪ ಅವರ ಅಧ್ಯಕ್ಷತೆಯಲ್ಲಿ ಅನಿಕೇತನ ಮಾಯಣ್ಣ, ಎಂ.ತಿಮ್ಮಯ್ಯ, ಅಂಬುಜಾ ಪ್ರಕಾಶ್, ವಿ.ರೇಣುಕಾ ಪ್ರಸನ್ನ, ರಾಂ.ಕೆ.ಹನುಮಂತಯ್ಯ , ಬಿ.ಶೃಂಗೇಶ್ವರ್, ಶಾಂತಿ ವಾಸು ಮುಂತಾದವರು ಭಾಗವಹಿಸಲಿದ್ದು, ಗೀತಗಾಯನ, ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಸಿ.ಹೇಮಾವತಿ, ಸಂಚಾಲಕ ಡಾ.ಆರ್.ವಾದಿರಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಾಹಿತ್ಯ ಸಂಸ್ಕೃತಿ ಪ್ರಿಯರು ಆಗಮಿಸಲು ಕೋರಿದ್ದಾರೆ.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಪ್ರಧಾನಮಾಡಿದ ಉಪಲೋಕಾಯುಕ್ತ ಜಸ್ಟಿಸ್ ಕೆ ಎನ್ ಫಣಿoದ್ರ

ಇಂದು ಚಂದ್ರಶೇಖರ ಭಾರತಿ ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉಪಲೋಕಾಯುಕ್ತ ಜಸ್ಟಿಸ್ ಕೆ ಎನ್ ಫಣಿoದ್ರ ಅವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಪ್ರಧಾನ ಮಾಡಿದರು,
ಈ ಸಂದರ್ಭದಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸರಾವ್, ಉಪಾಧ್ಯಕ್ಷ ಎಲ್ ಗಣೇಶ್ ಸೇರಿದಂತೆ ನಿರ್ದೇಶಕರು, ಸಿಇಓ ಶ್ರೀಧರ್ ಹಾಗು ಸಿಬ್ಬಂದಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.











