ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮ ಭಕ್ತಿಭಾವ ಸಂಭ್ರಮದಿಂದ ಆಚರಣೆ
ಶಿಡ್ಲಘಟ್ಟ : ಪ್ರಧಾನಿ ನರೇಂದ್ರ ಮೋದೀಜಿ ಅವರ ನೇತೃತ್ವದಲ್ಲಿ ದೇಶವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗುತ್ತಿದೆ ಮೂಲಸೌಕರ್ಯ, ತಂತ್ರಜ್ಞಾನ, ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳಿಗೆ ವೇಗ ದೊರೆತಿದೆ ಎಂದು
ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.
ನಗರದ ಕೋಟೆ ವೃತ್ತದಲ್ಲಿರುವ ಪುರಾತನ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಗುರುವಾರ ರಾತ್ರಿ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ 10 ಸಾವಿರ ದೀಪಗಳನ್ನು ಬೆಳಗಿಸುವ ಮೂಲಕ “ಆಶೀರ್ವಾದದ ದೀಪ” ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದ
ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ನರೇಂದ್ರ ಮೋದೀಜಿ ಅವರ ಜನ್ಮದಿನದ ಅಂಗವಾಗಿ ದೇಶದಾದ್ಯಂತ ವಿವಿಧ ಸೇವಾ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀಪಾಲಂಕಾರ ಮಾಡಲಾಗಿದೆ ಎಂದು ಹೇಳಿದರು.
ದೇವಾಲಯದ ಆವರಣ ಹಾಗೂ ಒಳಾಂಗಣದಲ್ಲಿ ದೀಪಗಳನ್ನು ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು, ದೀಪಗಳ ಸಾಲಿನಿಂದ ದೇವಾಲಯದ ಆವರಣ ಕಂಗೊಳಿಸಿದ್ದು, ಭಕ್ತಿಭಾವದ ವಾತಾವರಣ ನಿರ್ಮಾಣವಾಗಿತ್ತು.
ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಧಾನಿ ನರೇಂದ್ರ ಮೋದೀಜಿ ಅವರ ಆರೋಗ್ಯ, ದೀರ್ಘಾಯುಷ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಸೀಕಲ್ ಆನಂದಗೌಡ ,
ಕೆ.ಸುರೇಂದ್ರಗೌಡ,ದೇವರಾಜ್, ಕನಕಪ್ರಸಾದ್, ಚಿನ್ನಿ,ಪ್ರಕಾಶ್, ನಾರಾಯಣಸ್ವಾಮಿ,ರಾಮಕೃಷ್ಣಪ್ಪ, ಸಂಜೀವಪ್ಪ, ಮಂಜುಳಾ, ತ್ರಿವೇಣಿ, ಲಕ್ಷ್ಮಿ, ಕಾರ್ಯಕರ್ತರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.