ವಿಜಯ ದರ್ಪಣ ನ್ಯೂಸ್…
ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ ರವರನ್ನು ಸನ್ಮಾನಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬೀರಿಹುಂಡಿ ಬಸವಣ್ಣ

ತಾಂಡವಪುರ ಸೆಪ್ಟೆಂಬರ್ 21 ಮಾಜಿ ಸಚಿವ ಡಾ. ಎಚ್ ಸಿ ಮಹದೇವಪ್ಪನವರನ್ನು ಅವರ ನಿವಾಸದಲ್ಲಿ ನೂತನ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೀರೇಹುಂಡಿ ಬಸವಣ್ಣ ರವರು ಭೇಟಿ ಮಾಡಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಗೌರವ ಸ್ಪೀಕರ್ ಮಾತನಾಡಿದ ಮಹದೇವಪ್ಪನವರು ಜಿಲ್ಲೆಯಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆಗೆ ಹೆಚ್ಚು ಶ್ರಮವಹಿಸುವ ಜೊತೆಗೆ ಕಾರ್ಯಕರ್ತನನ್ನು ಒಗ್ಗೂಡಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದಕ್ಕೆ ಹೆಚ್ಚು ಶ್ರಮವಹಿ ಎಂದರು.
ಮೈಸೂರು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಜೊತೆಗೆ ಸರ್ಕಾರದ ಯೋಜನೆಗಳು ಮತ್ತು ಸವಲತ್ತುಗಳನ್ನು ಸಾರ್ವಜನಿಕರಿಗೆ ಅದರಲ್ಲೂ ಕಟ್ಟ ಕಡೆಯ ವ್ಯಕ್ತಿಗಳಿಗೆ ಸಿಗುತ್ತಿದ್ದೀಯಾ ಇಲ್ಲವಾ ಎಂಬುದನ್ನ ತಿಳಿದುಕೊಂಡು ಅಂತಹ ಗ್ರಾಮಗಳಿಗೆ ಭೇಟಿಕೊಟ್ಟು ಅವರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ದೊರಕಿಸಿಕೊಡಲು ಹೆಚ್ಚು ಸಮವಹಿಸಿ ನಾವು ಕೂಡ ಪಕ್ಷ ಸಂಘಟನೆಗೆ ನಿಮಗೆ ಎಲ್ಲಾ ರೀತಿಯ ಸಹಕಾರವನ್ನು ನೀಡುತ್ತೇವೆ ಎಂದು ಮಹಾದೇವಪ್ಪನವರು ತಿಳಿಸಿದರು.
ಈ ಸಂದರ್ಭದಲ್ಲಿ ನೂತನ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಕಡಕೋಳ ನಾಗರಾಜು ಕಾಂಗ್ರೆಸ್ ಮುಖಂಡ ದೇವನೂರು ಬುಲೆಟ್ ಮಾದೇವಪ್ಪ ಎಚ್ ಸಿ ಮಹದೇವಪ್ಪನವರ ಅಭಿಮಾನಿ ಬಳಗದ ಅಧ್ಯಕ್ಷ ಕಡಕೋಳ ಭರತ್ ಹಾಗೂ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು










