--Ads--

ಮುತ್ಸಂದ್ರ ಸಹಕಾರ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ : ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

On: September 24, 2026 8:00 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್……

ಮುತ್ಸಂದ್ರ ಸಹಕಾರ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ : ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

 

ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ಮುತ್ಸಂದ್ರ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ಹಾಗೂ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಂ.ಸಿ.ಬಿ. ಬಾಬುರೆಡ್ಡಿ ಹಾಗೂ ಹಾಲಿ ಅಧ್ಯಕ್ಷರಾದ ಬೆಳ್ಳಿಕೆರೆ ರಾಜಬಾಬು ನೇತೃತ್ವದಲ್ಲಿ ಅಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ. ಸ್ಮರಣ ಸಂಚಿಕೆ ಬಿಡುಗಡೆಮಾಡಿದದರು.

ಬಳಿಕ ಮಾಜಿ ಅಧ್ಯಕ್ಷ ಎಂ.ಸಿ.ಬಿ. ಬಾಬುರೆಡ್ಡಿ ಮಾತನಾಡಿ. ಸಹಕಾರ ಸಂಘವು ಕಳೆದ 50 ವರ್ಷಗಳಿಂದ ಸದಸ್ಯರ ವಿಶ್ವಾಸ ಮತ್ತು ಸಹಕಾರದೊಂದಿಗೆ ಮುನ್ನಡೆಯುತ್ತಾ ಬಂದಿದೆ. ಸಂಘದ ಅಭಿವೃದ್ಧಿಯಲ್ಲಿ ಹಿಂದಿನ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಹಾಗೂ ಗ್ರಾಮಸ್ಥರ ಕೊಡುಗೆ ಮಹತ್ವದ್ದಾಗಿದೆ.

ಸಹಕಾರ ತತ್ವದಡಿ ಗ್ರಾಮೀಣ ಭಾಗದ ರೈತರಿಗೆ ಮತ್ತು ಸದಸ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿಯೂ ಸಂಘದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

ಬಳಿಕ ಅಧ್ಯಕ್ಷ ಬೆಳ್ಳಿಕೆರೆ ರಾಜಬಾಬು ಮಾತನಾಡಿ. ಮುತ್ಸಂದ್ರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘವು 50 ವರ್ಷಗಳನ್ನು ಪೂರೈಸಿರುವುದು ಸಂತಸದ ಸಂಗತಿಯಾಗಿದೆ. ಸಂಘದ ಸದಸ್ಯರ ಸಹಕಾರ ಮತ್ತು ವಿಶ್ವಾಸವೇ ಈ ಸಾಧನೆಗೆ ಪ್ರಮುಖ ಕಾರಣವಾಗಿದೆ.

ಸಂಘದ ಪ್ರಗತಿಗೆ ಸದಸ್ಯರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಸದಸ್ಯರ ಹಿತದೃಷ್ಟಿಯಿಂದ ಸಂಘದ ಕಾರ್ಯಚಟುವಟಿಕೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಹಕಾರ ಸಂಘದ ಷೇರುದಾರರ ಮಕ್ಕಳಲ್ಲಿ ಹತ್ತನೇ ತರಗತಿ ಹಾಗು ದ್ವಿತೀಯ ಪಿಯುಸಿ ತರಗತಿಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿದ ಸುಮಾರು 30 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅದ್ಯಕ್ಷ ಪಟೇಲ್ ಬಾಬುರೆಡ್ಡಿ. ಟಿಎಪಿಸಿಎಂಎಸ್ ಅದ್ಯಕ್ಷ ಸುರೇಶ್, ಉಪಾದ್ಯಕ್ಷ ಮುತ್ಕೂರು ಮುನಿರಾಜು, ಬಿಡಿಸಿಸಿ ಬ್ಯಾಂಕ್ ಉಪಾದ್ಯಕ್ಷ ಕೆ.ಕೃಷ್ಣಮೂರ್ತಿ, ಸಹಕಾರ ಸಂಘದ ಮಾಜಿ ಅದ್ಯಕ್ಷ ಕೋಟೂರು ವಿಜಯೇಂದ್ರ ಬಾಬು, ಸಿಇಓ ನಾಗೇಶ್, ಹೋಬಳಿ ಮುಖಂಡ ಪ್ರಕಾಶ್, ಸೇರಿದಂತೆ ಮುತ್ಸಂದ್ರ ಗ್ರಾಮದ ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಗಳ ಸದಸ್ಯರು, ಸಹಕಾರ ಸಂಘದ ನಿರ್ದೇಶಕರು, ಮುಖಂಡರು ಹಾಗೂ ಶೇರುದಾರರು ಭಾಗವಹಿಸಿದ್ದರು.

WhatsApp

Join Now

Telegram

Join Now

Instagram

Join Now