--Ads--

ಕಾನಿಪ ಧ್ವನಿ ಸಂಘಟನೆಯ ಹೊಸಕೋಟೆ ತಾಲೂಕು ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಆಯ್ಕೆ

On: September 25, 2026 5:45 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್….

ಕಾನಿಪ ಧ್ವನಿ ಸಂಘಟನೆಯ ಹೊಸಕೋಟೆ ತಾಲೂಕು ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಆಯ್ಕೆ

ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ವಿನೋದ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹೊಸಕೋಟೆ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಬೆಂಗಳೂರು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ರಾಜ್ಯ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಂ. ಚೌಡೇಗೌಡ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷರಿಗೆ ಅಧಿಕೃತ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳ ಪತ್ರಕರ್ತರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಂ. ಚೌಡೇಗೌಡ ಅವರು ಅಭಿನಂದನೆ ಸಲ್ಲಿಸಿ, ಪತ್ರಕರ್ತರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವುದು, ಪತ್ರಕರ್ತರ ಹಕ್ಕು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ಸಂಘಟಿತವಾಗಿ ಧ್ವನಿ ಎತ್ತುವುದು ಹಾಗೂ ತಾಲೂಕು ಮಟ್ಟದಲ್ಲಿ ಪತ್ರಕರ್ತರ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದು ಸಂಘಟನೆಯ ಪ್ರಮುಖ ಉದ್ದೇಶಗಳಾಗಿವೆ ಎಂದು ಅವರು ತಿಳಿಸಿದರು.

ಪತ್ರಕರ್ತರು ಸಮಾಜದ ಆಗುಹೋಗುಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಅವರ ವೃತ್ತಿಪರ ಹಾಗೂ ಸಾಮಾಜಿಕ ಹಿತಾಸಕ್ತಿಗಳಿಗೆ ಸಂಘಟನೆ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಮುಖಂಡರು ಹೇಳಿದರು.

ಅಧ್ಯಕ್ಷರಾಗಿ ಆಯ್ಕೆಯಾದ ತಾವರೆಕೆರೆ ವಿನೋದ್ ಅವರು ಮಾತನಾಡಿ, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿರುವ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸಂಘಟನೆಯ ಎಲ್ಲ ಪತ್ರಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. ಸಂಘಟನೆಯನ್ನು ತಾಲೂಕು ಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷ ಮೋಹನ್, ಹಿರಿಯ ಪತ್ರಕರ್ತ ಜಗಳೂರು ಲಕ್ಷ್ಮಣ್ ರಾವ್, ಸುಪ್ರೀಂ ಕೋರ್ಟ್ ವಕೀಲ ಮಂಜುನಾಥ್, ನಯಾಜ್ ಖಾನ್, ಲಕ್ಷ್ಮಿಪತಿ, ಹಾಗೂ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು, ಹಿರಿಯ ಪತ್ರಕರ್ತರು ಹಾಗೂ ವಿವಿಧ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು, ನೂತನ ಅಧ್ಯಕ್ಷರಿಗೆ ಶುಭಾಶಯಗಳನ್ನು ಕೋರಿದರು.

WhatsApp

Join Now

Telegram

Join Now

Instagram

Join Now