--Ads--

ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಚಟುವಟಿಕೆಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ

On: September 26, 2026 4:13 AM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಚಟುವಟಿಕೆಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ

ಶಿಡ್ಲಘಟ್ಟ : ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಸೇರಿದಂತೆ ಇತರ ಚಟುವಟಿಕೆಗಳಿಂದ ದೂರವಿದ್ದು,
ಆಹಾರದ ಕಡೆ ಗಮನ ಹರಿಸಬೇಕು ಮನೆಯಲ್ಲಿ ತಯಾರಿಸುವ ಶುದ್ಧ ಹಾಗೂ ಸಮತೋಲಿತ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು
ಎಂದು JMFC ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ತಿಳಿಸಿದರು.

ನಗರದ “ದಿ ನ್ಯೂ ಇಂಡಿಯನ್ ಪಬ್ಲಿಕ್ ಸ್ಕೂಲ್‌ “ನಲ್ಲಿ ನಡೆದ ಪೋಷಣ್ ಮಾಸಾಚರಣೆ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ
ಪೌಷ್ಟಿಕ ಆಹಾರ ಅತ್ಯಗತ್ಯ ಮಕ್ಕಳು ಹೊರಗಡೆ ದೊರೆಯುವ ಅನಾರೋಗ್ಯಕರ ತಿಂಡಿಗಳಿಂದ ದೂರವಿರಬೇಕು ಎಂದು ಹೇಳಿದರು.

ತರಕಾರಿ, ಹಣ್ಣು, ಸೊಪ್ಪು, ಮೊಳಕೆಕಾಳು, ಮೊಟ್ಟೆ, ಮೀನು ಸೇರಿದಂತೆ ಪೌಷ್ಟಿಕ ಆಹಾರಗಳನ್ನು ನಿಯಮಿತವಾಗಿ ಸೇವಿಸಬೇಕು ಚಿಪ್ಸ್, ಬೇಕರಿ ಉತ್ಪನ್ನಗಳು, ಪಾನಿಪುರಿ, ಗೋಬಿ ಮಂಚೂರಿಯಂತಹ ಹೆಚ್ಚು ಎಣ್ಣೆ, ಉಪ್ಪು ಹಾಗೂ ಕೃತಕ ಬಣ್ಣ ಹೊಂದಿರುವ ಆಹಾರಗಳ ಸೇವನೆಯನ್ನು ಕಡಿಮೆ ಮಾಡಬೇಕು ಎಂದರು.

ಕಾರ್ಯಕ್ರಮದ ವೇಳೆ ಶಾಲೆಯ ಶೌಚಾಲಯಕ್ಕೆ ಭೇಟಿ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಶಾಲೆಯ ಶೌಚಾಲಯಗಳ ಅಶುಚಿತ್ವ ಕಂಡು ಅಸಮಾಧಾನ ವ್ಯಕ್ತಪಡಿಸಿದರು ,ಶೌಚಾಲಯಗಳ ಸ್ವಚ್ಛತೆ ಹಾಗೂ ನಿರ್ವಹಣೆ ಕುರಿತು ಪ್ರಾಂಶುಪಾಲರನ್ನು ಪ್ರಶ್ನಿಸಿದಾಗ, ಅವರು ಸಮರ್ಪಕವಾಗಿ ಸ್ಪಂದಿಸದಿರುವುದಕ್ಕೂ ನ್ಯಾಯಾಧೀಶರು ಬೇಸರ ವ್ಯಕ್ತಪಡಿಸಿದರು, ಈ ಹಿನ್ನೆಲೆಯಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ (DDPI) ದೂರು ದಾಖಲಿಸುವಂತೆ ತಮ್ಮ ಸಿಬ್ಬಂದಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವಿದ್ಯಾ ವಸ್ತ್ರದ್‌ ಮಾತನಾಡಿ, ಶಾಲೆಯ LKG ಸೇರಿದಂತೆ ಎಲ್ಲ ತರಗತಿಗಳ ಮಕ್ಕಳಿಗೆ ಸುರಕ್ಷಿತ ಹಾಗೂ ಬಾಲಸ್ನೇಹಿ ವಾತಾವರಣ ಕಲ್ಪಿಸಬೇಕು ಆಟದ ಮೈದಾನ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಲು ಮಕ್ಕಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದರು.

ಮಕ್ಕಳ ಲಂಚ್ ಬಾಕ್ಸ್ ನಲ್ಲಿ ಪ್ರತಿದಿನ ಒಂದೇ ರೀತಿಯ ಆಹಾರ ನೀಡದೆ, ವಿವಿಧ ಬಣ್ಣಗಳ ತರಕಾರಿ, ಹಣ್ಣು, ನಟ್ಸ್ ಹಾಗೂ ಇತರ ಪೌಷ್ಟಿಕ ಆಹಾರಗಳನ್ನು ಸೇರಿಸುವಂತೆ ಪೋಷಕರಿಗೆ ಸಲಹೆ ನೀಡಿದರು.

ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ತಪ್ಪು ಮಕ್ಕಳ ಹಕ್ಕುಗಳ ಉಲ್ಲಂಘನೆ ಕಂಡುಬಂದಾಗ 112 ಅಥವಾ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಹಾಗೂ ಬಾಲ್ಯವಿವಾಹ ತಡೆ ಕುರಿತು ಅವರು ಜಾಗೃತಿ ಮೂಡಿಸಿದರು. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಹಾಗೂ 21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗಂಡುಮಕ್ಕಳಿಗೆ ಮದುವೆ ಮಾಡುವುದು ಕಾನೂನುಬಾಹಿರ. ಇಂತಹ ಪ್ರಕರಣಗಳು ಕಂಡುಬಂದರೆ ಮಕ್ಕಳು ಮೌನವಾಗದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಮಕ್ಕಳಿಗೆ ಸ್ವಚ್ಛ, ಸುರಕ್ಷಿತ ಹಾಗೂ ಬಾಲಸ್ನೇಹಿ ವಾತಾವರಣ ಕಲ್ಪಿಸುವುದು ಶಾಲೆಯ ಜವಾಬ್ದಾರಿಯಾಗಿದೆ ಶಾಲೆಯಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಸ್ವಚ್ಛತಾ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಸರ್ಕಾರಿ ಸಹಾಯಕ ಅಭಿಯೋಜಕ ಮೊಹಮದ್‌ ಖಾಜಾ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

Instagram

Join Now