--Ads--

ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ

On: September 26, 2026 3:01 PM
Follow ಮಾಡಿ
--Ads--

Whatsapp Channel

Join Now

Telegram Group

Join Now

ವಿಜಯ ದರ್ಪಣ ನ್ಯೂಸ್…..

ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ

ಶಿಡ್ಲಘಟ್ಟ : ಆಯುಷ್ ಇಲಾಖೆಯ ವತಿಯಿಂದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ ಆಯುಷ್ ಪದ್ಧತಿಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ವೈದ್ಯರು ಸಲಹೆ ನೀಡಿ, ಉಚಿತವಾಗಿ ಔಷಧಿಗಳನ್ನು ನೀಡಿದರು.

ತಾಲ್ಲೂಕು ಕಚೇರಿ ಆವರಣದಲ್ಲಿ AUSH ಇಲಾಖೆಯ ವತಿಯಿಂದ ರಾಷ್ಟ್ರೀಯ AYUSH ಅಭಿಯಾನದಡಿ
ಜಿಲ್ಲಾ ಮಟ್ಟದ ಉಚಿತ ವಿಶೇಷ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್‌ ಆನಂದಗೌಡ ಮಾತನಾಡಿ ,ತಾಲ್ಲೂಕು ಕಚೇರಿಗೆ ತಮ್ಮ ವಿವಿಧ ಕೆಲಸಗಳಿಗಾಗಿ ಬಂದಿದ್ದ ಕೆಲವರು ಶಿಬಿರದ ಬಗ್ಗೆ ತಿಳಿದು ಅನಿರೀಕ್ಷಿತವಾಗಿ ಭಾಗವಹಿಸುತ್ತಿದ್ದಾರೆ ಇಂತಹ ಕಾರ್ಯಕ್ರಮಗಳ ಉದ್ದೇಶ ಹೆಚ್ಚಿನ ಜನರಿಗೆ ತಲುಪಬೇಕಾದರೆ, ಗ್ರಾಮ ಮಟ್ಟದಲ್ಲಿ ಮುಂಚಿತವಾಗಿ ಪ್ರಚಾರ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಸರ್ಕಾರ ಬಡವರು ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತಿದೆ ಆದರೆ, ಶಿಬಿರದ ಕುರಿತು ತಾಲ್ಲೂಕಿನ ಜನರಿಗೆ ಮುಂಚಿತವಾಗಿ ಸೂಕ್ತ ಮಾಹಿತಿ ಹಾಗೂ ಜಾಗೃತಿ ಮೂಡಿಸದಿರುವುದು ಬೇಸರದ ಸಂಗತಿ ಎಂದು ಹೇಳಿದರು.

ಸರ್ಕಾರ ಬಡವರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗಾಗಿ ಆಯೋಜಿಸುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಶಿಬಿರದಲ್ಲಿ ಬಾಗವಹಿಸಿದ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, AYUSH ಪದ್ಧತಿಗಳ ಮೂಲಕ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ವೈದ್ಯರು ಸಲಹೆ ನೀಡಿ, ಉಚಿತವಾಗಿ ಔಷಧಿಗಳನ್ನು ನೀಡಿದರು.
ಶಿಬಿರದಲ್ಲಿ ಆಯುಷ್ ವೈದ್ಯರಾದ ಡಾ.ವಿಜಯ್ ಕುಮಾರ್,ಡಾ.ಸುಂದರ್ ರಾಜ್, ಡಾ.ಅನಿಲ್ ಕುಮಾರ್ ಹಾಗು ಡಾ.ದಿವ್ಯಲಕ್ಷ್ಮಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

WhatsApp

Join Now

Telegram

Join Now

Instagram

Join Now